ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜ್ಯದ ಹಿಂದುಳಿದ ಜಿಲ್ಲೆಗಳೆಂದು ಕರೆಸಿಕೊಳ್ಳುವ ‘ಕಲ್ಯಾಣ ಕರ್ನಾಟಕ’ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೂಲಕ 5 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಮಾಣೆಕ್ ಷಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಅಂದಿನ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 371ಜೆ ಸೇರ್ಪಡೆ ಮಾಡಿದ್ದಕ್ಕೆ 10 ವರ್ಷ ತುಂಬಿದೆ. ದಶಮಾನೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಕಲ್ಯಾಣದ ಅಭಿವೃದ್ಧಿಗೆ ನಿರ್ಧರಿಸಿದೆ ಎಂದು ಹೇಳಿದರು.
ಶತಮಾನೋತ್ಸವ ಆಚರಣೆ:ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ಯಲ್ಲಿ 1924ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ನ ಚಾರಿತ್ರಿಕ ಬೆಳಗಾವಿ ಅಧಿವೇಶನ ಹಾಗೂ ಅದೇ ವರ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಕೈಗೊಂಡಿದ್ದ ‘ಬಹಿಷ್ಕೃತ ಹಿತಕಾರಿಣಿ ಸಭಾ’ ನಡೆದು ನೂರು ವರ್ಷಗಳಾಗಿವೆ. ಧಾರ್ವಿುಕ ಸಾಮರಸ್ಯ ಮತ್ತು ವಿವಿಧ ಭಾಷೆಗಳನ್ನಾಡುವ ಜನರ ನಡುವಣ ಸೌಹಾರ್ದಯುತ ಸಂಬಂಧಕ್ಕೆ ಒತ್ತು ನೀಡುವ ಮಾತುಗಳನ್ನು ಗಾಂಧೀಜಿ ಆಡಿದ್ದರು. ಹಾಗೆಯೇ ದಮನಿತ ವರ್ಗಗಳ ಪರವಾದ ಹೋರಾಟಕ್ಕೆ ‘ಬಹಿಷ್ಕೃತ ಹಿತಕಾರಿಣಿ ಸಭಾ’ ಪ್ರಮುಖ ಘಟನೆಯಾಗಿದೆ. ಈ ಎರಡರ ಶತಮಾನೋತ್ಸವವನ್ನು ಸ್ಮರಣೀಯವಾಗಿ ಆಚರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಭೂ ಕುಸಿತ ತಡೆಗೆ ಉಪಶಮನ ಕ್ರಮ:ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 250 ಗ್ರಾಪಂ ವ್ಯಾಪ್ತಿಯಲ್ಲಿ ಭೂ-ಕುಸಿತ ಸಂಭಿವಿಸಬಹುದಾದ 1351 ಗ್ರಾಮಗಳನ್ನು ಭೂ-ವೈಜ್ಞಾನಿಕ ಸರ್ವೆಕ್ಷಣಾ ಸಂಸ್ಥೆ ಗುರುತಿಸಿದೆ. ಈ ಪ್ರದೇಶಗಳಲ್ಲಿ ಭೂ-ಕುಸಿತ ತಡೆಗೆ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ರಾಕ್ ಮೆಕಾನಿಕ್ಸ್ ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಉಪಶಮನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಹೇಳಿದರು.
ಅತಿವೃಷ್ಟಿ, ಅನಾವೃಷ್ಟಿ ನಿರ್ವಹಣೆ:ರಾಜ್ಯವು ಒಂದು ವರ್ಷದಿಂದ ವಿಭಿನ್ನ ಪರಿಸ್ಥಿತಿ ಎದುರಿಸಿದೆ. ಕಳೆದ ವರ್ಷ ತೀವ್ರ ಬರಗಾಲಕ್ಕೆ ತುತ್ತಾದರೆ, ಈ ಬಾರಿ ಅನಾವೃಷ್ಟಿಗೆ ಒಳಗಾಗಿದೆ. ಕೇಂದ್ರ ಸರ್ಕಾರವು ಬರ ಪರಿಹಾರದ ಮೊತ್ತವನ್ನು ತಡವಾಗಿ ನೀಡಿದರೂ ರಾಜ್ಯದಲ್ಲಿ ಬರದಿಂದಾಗಿ ಜನರಿಗೆ ಅನನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ 3454.66 ಕೋಟಿ ರೂ. ಬೆಳೆಹಾನಿ ಪರಿಹಾರ ವಿತರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕಳೆದ ಸಾಲಿಗಿಂತ ಶೇ.5 ಪ್ರಗತಿ:ರಾಜ್ಯವು 2023-24ನೇ ಸಾಲಿನಲ್ಲಿ 1,66,545 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.5.20 ಪ್ರಗತಿ ಹೊಂದಿದೆ. ಇದೇ ಅವಧಿಯಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 84,232 ಕೋಟಿ ರೂ. ಬಂಡವಾಳ ಹರಿದು ಬರಲಿದೆ. 1,56,986 ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮುಂದಿನ ಫೆಬ್ರವರಿಯಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇಶ-ವಿದೇಶಗಳಲ್ಲಿ ರೋಡ್ ಶೋಗಳನ್ನು ನಡೆಸಿ ಹೂಡಿಕೆದಾರರನ್ನು ಆಹ್ವಾನಿಸಲಾಗುತ್ತಿದೆ ಎಂದರು.
ನೆರೆ ರಾಷ್ಟ್ರಗಳ ಪರಿಸ್ಥಿತಿ ಎದುರಾಗಬಹುದು:ಸ್ವಾತಂತ್ರ್ಯ ಹೋರಾಟಗಾರರ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿದೆ. ಗಾಂಧೀಜಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಸ್ನೇಹಿತರು, ಡಾ. ಬಿ.ಆರ್. ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜಾತ್ಯತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ವಣಕ್ಕೆ ಬುನಾದಿ ಹಾಕಿದ ಜವಾಹರಲಾಲ್ ನೆಹರು ಆಶಯಗಳನ್ನು ಪಾಲಿಸದಿದ್ದರೆ, ನೆರೆ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿಬಿಡಬಹುದು ಎಂಬ ಎಚ್ಚರಿಕೆ ನಮ್ಮಲ್ಲಿ ಇರಬೇಕಾಗುತ್ತದೆ ಎಂದು ಸಿಎಂ ಹೇಳಿದರು.
ಕೇಂದ್ರ ಸರ್ಕಾರದಿಂದ ತಾರತಮ್ಯ:ಜನಕಲ್ಯಾಣ ಕಾರ್ಯಗಳ ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದೆ. ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಕೇಂದ್ರ ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಮುಂದಿನ ದಿನಗಳಲ್ಲಾದರೂ ರಾಜ್ಯಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
15,428 ಹುದ್ದೆಗೆ ಅನುಮೋದನೆ:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಒತ್ತು ನೀಡಿದೆ. 15,428 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದು ಸಿಎಂ ತಿಳಿಸಿದರು. ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಕಳೆದ ಸಾಲಿಗಿಂತ ಶೇ.5 ಪ್ರಗತಿ:ರಾಜ್ಯವು 2023-24ನೇ ಸಾಲಿನಲ್ಲಿ 1,66,545 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.5.20 ಪ್ರಗತಿ ಹೊಂದಿದೆ. ಇದೇ ಅವಧಿಯಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 84,232 ಕೋಟಿ ರೂ. ಬಂಡವಾಳ ಹರಿದು ಬರಲಿದೆ. 1,56,986 ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮುಂದಿನ ಫೆಬ್ರವರಿಯಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇಶ-ವಿದೇಶಗಳಲ್ಲಿ ರೋಡ್ ಶೋಗಳನ್ನು ನಡೆಸಿ ಹೂಡಿಕೆದಾರರನ್ನು ಆಹ್ವಾನಿಸಲಾಗುತ್ತಿದೆ ಎಂದರು.
ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರದ ಅಸಹಕಾರ:ಶಕ್ತಿ ಯೋಜನೆಯಡಿ 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಈ ವರೆಗೆ 25,259 ಕೋಟಿ ರೂ. ಖಾತೆಗೆ ವರ್ಗಾಯಿಸ ಲಾಗಿದೆ. ‘ಅನ್ನಭಾಗ್ಯ’ ಯೋಜನೆಗೆ ಕೇಂದ್ರ ಅಕ್ಕಿ ನೀಡದ್ದರಿಂದ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಸಿಎಂ ಹೆಳಿದರು.
ಅಖಂಡತೆ ಪಾಲಿಸುತ್ತಾ ಅಭಿವೃದ್ಧಿ ಎಲ್ಲ ಜಾತಿ, ಮತಗಳ ಜನರು ಒಗ್ಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಎಲ್ಲರೂ ಒಟ್ಟುಗೂಡಿ ಈ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಿದೆ. ಧರ್ಮ, ಭಾಷೆಯ ಆಧಾರದ ಮೇಲೆ ಭೇದ-ಭಾವ ಮರೆತು ದೇಶದ ವೈವಿಧ್ಯತೆ ಗೌರವಿಸುತ್ತಾ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾಗಿದೆ ಎಂದು ಸಿಎಂ ತಿಳಿಸಿದರು.
ಬೆಂಗಳೂರು:ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುವಾರ ಸಂಜೆ ರಾಜಭವನದಲ್ಲಿ ಹಮ್ಮಿಕೊಂಡ ಚಹಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಅಕ್ರಮ ವಿಚಾರವಾಗಿ ಎರಡು ವಾರದ ಹಿಂದೆ ಮುಖ್ಯಮಂತ್ರಿಯವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದು ರಾಜಕೀಯವಾಗಿ ಸಾಕಷ್ಟು ಸದ್ದು ಮಾಡಿತ್ತು, ತೀವ್ರ ಚರ್ಚೆಗೂ ಗ್ರಾಸವಾಗಿತ್ತು. ಹೀಗಾಗಿ ಗುರುವಾರದ ರಾಜಭವನ ಭೇಟಿಗೂ ಮಹತ್ವ ಇತ್ತು. ರಾಜಭವನದಲ್ಲಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡ ರಾಜ್ಯಪಾಲರು ಉಭಯ ಕುಶಲೋಪರಿ ನಡೆಸಿದರು. ಬಳಿಕ ಚಹಾಕೂಟ ಆಯೋಜನೆಗೊಂಡ ಗಾಜಿನ ಅರಮನೆಗೆ ಮುಖ್ಯಮಂತ್ರಿಯವರನ್ನು ಕರೆದೊಯ್ದರು. ಬಳಿಕ ಇಬ್ಬರೂ ವೇದಿಕೆ ಅಲಂಕರಿಸಿದ್ದರು. ಚಹಾಕೂಟದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ದಯಾನಂದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು:ರಾಜಭವನದಲ್ಲಿ 78ನೇ ಸ್ವಾತಂತ್ರೊ್ಯೕತ್ಸವದ ಅಂಗವಾಗಿ ರಾಜ್ಯಪಾಲ ಥಾವರ್​ಚಂದ್ ಗೆಹಲೋತ್ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಪೊಲೀಸ್ ತಂಡದಿಂದ ಗೌರವ ರಕ್ಷೆ ಸ್ವೀಕರಿಸಿದರು. ಧ್ವಜಾರೋಹಣದ ನಂತರ ಸಂದೇಶ ನೀಡಿದ ರಾಜ್ಯಪಾಲರು, ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.

ಸ್ವಾತಂತ್ರಾ್ಯನಂತರ ದೇಶ ಮತ್ತು ಕರ್ನಾಟಕದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದೆ. ಕರ್ನಾಟಕವು ದೇಶದ ಪ್ರಗತಿಪರ ರಾಜ್ಯವಾಗಿದೆ. ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಣ್ಣಿಸಿದರು.
ದೇಶ ಮತ್ತು ವಿಶ್ವದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅಮ್ಮನ ಹೆಸರಲ್ಲಿ ಒಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕೆಲಸ ಮಾಡಬೇಕು ಎಂದರು. ದೇಶದ ಆರ್ಥಿಕತೆ ಬಲಪಡಿಸಲು, ಪರಿಸರ ಸಂರಕ್ಷಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ಪ್ರತಿಜ್ಞೆ ಮಾಡೋಣ ಮತ್ತು ದೇಶದ ಭವಿಷ್ಯದ ಪೀಳಿಗೆಗಳು ನಮ್ಮ ಬಗ್ಗೆ ಉತ್ತಮ ಗ್ರಹಿಕೆಯನ್ನು ಬೆಳೆಸಿಕೊಳ್ಳುವಂತೆ ಶ್ರಮಿಸೋಣ ಎಂದು ಕರೆ ನೀಡಿದರು.
ಹಾಸನ: ಸಾಲಭಾದೆ ತಾಳದೇ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + four =
Remember me
