ಬೆಳಗಾವಿ:ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಅವರ ಪರವಾಗಿ ಆಯೋಜಿಸಿದ್ದ ಪ್ರಜಾಧ್ವನಿ- ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದು ವರ್ಷ ಗ್ಯಾರಂಟಿಗಳು ನಿಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಈಗಾಗಲೇ ತೆಗೆದಿಟ್ಟಿದ್ದೇನೆ ಎಂದು ಭರವಸೆಯ ಮಾತುಗಳನ್ನಾಡಿದರು.
ಇದನ್ನೂ ಓದಿ:ಸಿಕ್ಸ್​ ಹೊಡೆಯಲು ಗಾಳಿಯಲ್ಲಿ ಜಿಗಿದ ‘ಕಿವೀಸ್’​ ಆಟಗಾರ! ಹೀಗೂ ಆಡ್ತಾರಾ? ಬೆರಗಾದ್ರು ಕ್ರಿಕೆಟ್ ಫ್ಯಾನ್ಸ್
“ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ, ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಕೊಡಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ. ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಪುತ್ರನನ್ನು ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚುತ್ತದೆ” ಎಂದರು.
“ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಬಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದು, ಇದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಸುಳ್ಳು ಹೇಳಿ ಹೋಗಿದ್ದಾರೆ. ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗದಿರಿ” ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಆ ವಿಷಯವಾಗಿ ನಾನೇ ಬೊಮ್ಮಾಯಿಗೆ ಬೈದಿದ್ದೆ ಎಂದು ಯತ್ನಾಳ್ ಹೇಳಿದ್ಯಾಕೆ?
“ಮೊದಮೊದಲು ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತು ಹೋಗುತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಈಗಾಗಲೇ ತೆಗೆದಿಟ್ಟಿದ್ದೇನೆ” ಎಂದರು.
ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

ತಮ್ಮ ತಂಡದ ಆಟಗಾರನ ಮೇಲೆಯೇ ಹಾರ್ದಿಕ್​ ರೌದ್ರಾವತಾರ! ಹೀಗೆಲ್ಲಾ ಆಡಿದ್ರೆ… ಫ್ಯಾನ್ಸ್​ ಸಿಡಿಮಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
