ಬೆಂಗಳೂರುಶಾಲಾ ಶಿಕ್ಷಣ ಇಲಾಖೆಯು 2022-23ನೇ ಸಾಲಿಗೆ ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 5 ಸೀಟರ್ ರಿವರ್ಸಿಬಲ್ ಡೆಸ್ಕ್ ಸರಬರಾಜು ಮಾಡಲು 49.89 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದಿಂದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜು ಸೇರಿದಂತೆ 67,742 ಡೆಸ್ಕ್‌ಗಳನ್ನು ಖರೀದಿಸುತ್ತಿದೆ. ಖರೀದಿಗೆ ಶೇ.10 ಪಾವತಿ ಮಾಡಿದ್ದು, ಉಳಿದ ಶೇ.90 ಹಣವನ್ನು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಪನಿರ್ದೇಶಕರಿಂದ ಬಿಡುಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಈ ಹಿಂದೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ-ಕಾಲೇಜು ಮಕ್ಕಳಿಗೆ ಉತ್ತಮ ಡೆಸ್ಕ್‌ಗಳನ್ನು ನೀಡುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಖರೀದಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
