ಬಾಳೆಹೊನ್ನೂರು:ಕರ್ನಾಟಕ ರಾಜ್ಯವೊಂದರಲ್ಲೇ ಪ್ರತಿ ವರ್ಷ 50 ಲಕ್ಷ ಗೋವುಗಳ ವಧೆಯಾಗುತ್ತಿದೆ. ಇದರ ಹಿಂದೆ 30 ಸಾವಿರ ಕೋಟಿ ರೂ. ಅಕ್ರಮ ವಹಿವಾಟು ನಡೆಯುತ್ತಿದೆ. ಈ ಹಣ ಸಮಾಜ ವಿರೋಧಿ ಕೃತ್ಯಗಳಿಗೆ ವಿನಿಯೋಗವಾಗುತ್ತಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಲಂಚದ ರೂಪದಲ್ಲಿಯೂ ಸಂದಾಯವಾಗುತ್ತಿದೆ….
ಈ ವಿಷಯವನ್ನು ಬಹಿರಂಗಪಡಿಸಿದವರು ಕರ್ನಾಟಕ ಗೋ ಶಾಲಾ ಮಹಾಸಂಘದ ಅಧ್ಯಕ್ಷ ಡಾ. ಎಸ್.ಕೆ.ಮಿತ್ತಲ್. ರಂಭಾಪುರಿ ಪೀಠ ಹಾಗೂ ದೇವಗೋಡು ಗ್ರಾಮದ ಕಾಮಧೇನು ಗೋ ಸೇವಾ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದಾಗ ಅವರು ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿಲಡಾಖ್​ಗೆ ಹರಿಯುವ ಗಾಲ್ವಾನ್​ ನದಿ ದಿಕ್ಕನ್ನೇ ಬದಲಿಸುತ್ತಿದೆ ಚೀನಾ; ಉಪಗ್ರಹ ಚಿತ್ರಗಳಿಂದ ಕುತಂತ್ರ ಬಯಲು
ಗೋಹತ್ಯೆ ತಡೆಯಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಬಿಗಿ ಕಾನೂನನ್ನು ಕರ್ನಾಟಕದಲ್ಲಿಯೂ ರೂಪಿಸಬೇಕು. ಮಠಗಳು, ದೇವಸ್ಥಾನ, ಸಂಘ ಸಂಸ್ಥೆಗಳು ಹಾಗೂ ಗ್ರಾಮೀಣ ಮಹಿಳೆಯರು, ಸ್ವ ಸಹಾಯ ಸಂಘಗಳ ಮೂಲಕ ಗೋಶಾಲೆಗಳನ್ನು ತೆರೆಯಲು ಪ್ರೋತ್ಸಾಹಿಸಬೇಕು. ಗೋಮಾಳ ಜಾಗವನ್ನು ಕಾನೂನಿನಂತೆ ಮೀಸಲಿರಿಸಬೇಕು. ಸರ್ಕಾರಿ ಮಟ್ಟದಲ್ಲಿ ಈ ಕುರಿತು ಚರ್ಚೆ ನಡೆಯಬೇಕು ಹಾಗೂ ಗೋಸಂರಕ್ಷಣೆ ಕಾಯ್ದೆಯನ್ನು ಸಂಪೂರ್ಣ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.
ರಂಭಾಪುರಿ ಶ್ರೀಗಳೊಂದಿಗೆ ಚರ್ಚಿಸಿದ ಡಾ. ಎಸ್.ಕೆ.ಮಿತ್ತಲ್ ಅವರು, ದೇಶದಲ್ಲಿ ಗೋವುಗಳ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದರು. ಎಸ್.ಕೆ. ಮಿತ್ತಲ್ ಅವರ ಸಾಧನೆಯನ್ನು ಶ್ಲಾಘಿಸಿದ ಶ್ರೀಗಳು, ಪೀಠವು ಸದಾ ಅವರಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದರು.
ಚೀನಾ ಗುರಿಯಾಗಿಸಿ ಕ್ಷಿಪಣಿ ಸಜ್ಜುಗೊಳಿಸಿರುವ ಜಪಾನ್​; ಯಾವುದರ ಮುನ್ಸೂಚನೆ ಇದು…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 7 =
Remember me
