ಬೆಂಗಳೂರುಮಂಗಳುರು ವಿಶ್ವವಿದ್ಯಾಲಯದಲ್ಲಿ ‘ಕುಂದ ಕನ್ನಡ ಭಾಷೆಯ ಅಧ್ಯಯನ ಪೀಠ’ ಸ್ಥಾಪನೆಗೆ 50 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.
ಪೀಠ ಸ್ಥಾಪನೆಗೆ 2022ರ ಮೇ 16ರಂದು ನಡೆದಿದ್ದ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ವಿವಿ ಆಂತರಿಕ ಸಂಪನ್ಮೂಲದಿಂದ ಅಧ್ಯಯನ ಪೀಡ ಸ್ಥಾಪಿಸಲು 25 ಲಕ್ಷ ರೂ.ಗಳನ್ನು ಮೀಸಲಿಡಲು ನಿರ್ಣಯಿಸಲಾಗಿತ್ತು. ಬಳಿಕ ವಿವಿಗಳ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಮತ್ತು ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯ ನೀತಿಯನ್ನು ರೂಪಿಸುವ ಬಗ್ಗೆ ಉನ್ನತ ಶಿಕ್ಷಣ ಪರಿಷತ್ತಿಗೆ ತಿಳಿಸಲಾಗಿದೆ. ಉನ್ನತ ಶಿಕ್ಷಣ ಪರಿಷತ್ತು ತಜ್ಞರ ಸಮಿತಿ ರಚಿಸಿ ಅವರಿಂದ ವರದಿ ಪಡೆದಿದ್ದು, ಅನುಮೋದನೆ ನೀಡಿದೆ.
ವಿಶ್ವವಿದ್ಯಾಲಯಗಳ ಅಭಿವೃದ್ಧಿ ಅನುದಾನ 103ರಡಿ 8.5 ಕೋಟಿ ರೂ.ಗಳನ್ನು ಮಂಗಳೂರು ವಿವಿಗೆ ನೀಡಿದೆ. ಇದರಲ್ಲಿ 50 ಲಕ್ಷ ರೂ.ಗಳನ್ನು ಅಧ್ಯಯನ ಪೀಠ ಸ್ಥಾಪನೆಗೆ ಬಿಡುಗಡೆಗೊಳಿಸುವಂತೆ ತಿಳಿಸಲಾಗಿದೆ.
ನಿಗದಿತ ಅನುದಾನವನ್ನು ಬೇರೆ ಕಾರ್ಯಕ್ರಮಕ್ಕೆ ಬಳಸಿಕೊಂಡಲ್ಲಿ ದುರ್ಬಳಕೆ ಮಾಡಿಕೊಂಡಲ್ಲಿ ವಿವಿ ಕುಲಸಚಿವರೇ ಹೊಣೆಗಾರರಾಗಿರುತ್ತಾರೆಂದು ಉನ್ನತ ಶಿಕ್ಷಣ (ತಾಂತ್ರಿಕ ಶಿಕ್ಷಣ ಮತ್ತು ಯೋಜನೆ) ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
