ಬೆಂಗಳೂರು:ಚಿತ್ರಕಲೆ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ. ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಭಾನುವಾರ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಆಯೋಜಿಸಲಾಗಿದ್ದ ‘ಚಿತ್ರಸಂತೆ’ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ಎಲ್ಲ ರೀತಿಯ ನೆರವು ನೀಡಲಾಗುವುದು. ಕರ್ನಾಟಕ ಚಿತ್ರಕಲಾ ಪರಿಷತ್ ಅಭಿವೃದ್ಧಿಗೆ ಅನುದಾನ ನೀಡುವಂತೆ ಬಿ.ಎಲ್.ಶಂಕರ್ ನಮಗೆ ಮನವಿ ಮಾಡಿದ್ದರು. ಅದಕ್ಕೆ ನನ್ನ ಸಹಮತವಿದ್ದು, ಚಿತ್ರಕಲೆ ಅಭಿವೃದ್ಧಿಗೆ ನಮ್ಮ ಸಹಾಯ ಇರುತ್ತದೆ ಎಂದು ಸಿಎಂ ಹೇಳಿದರು.
ಯುವನಿಧಿ ಬೇಡ, ಕನ್ನಡಿಗರಿಗೆ ಉದ್ಯೋಗ ನೀಡಿ: ವಾಟಾಳ್ ನಾಗರಾಜ್2003ರಿಂದ ಪ್ರತಿ ವರ್ಷವೂ ಚಿತ್ರಸಂತೆ ಆಚರಣೆಯಾಗುತ್ತಿದೆ. ಹಿಂದೆ ಸಿಎಂಯಾಗಿದ್ದ ವೇಳೆ ಪ್ರತಿ ವರ್ಷವೂ ಚಿತ್ರಸಂತೆಗೆ ಚಾಲನೆ ಕೊಟ್ಟಿದ್ದೆ ಎಂದು ಸ್ಮರಿಸಿದ ಸಿಎಂ, 22 ರಾಜ್ಯಗಳಿಂದ 1,600 ಕಲಾವಿದರು ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ. ಈ ಬಾರಿ ಇದನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಿರುವುದು ಅವರಿಗೆ ವಿಶೇಷ ಗೌರವ ನೀಡಿದಂತಾಗಿದೆ ಎಂದರು. ಸಚಿವರಾದ ಎಚ್.ಕೆ.ಪಾಟೀಲ್,ಡಾ.ಎಂ.ಸಿ.ಸುಧಾಕರ್,ಶಾಸಕರಾದ ರಿಜ್ವಾನ್‌ಅರ್ಷದ್, ಅಜಯ್ ಸಿಂಗ್, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್,ಉಪಾಧ್ಯಕ್ಷ ಪ್ರಭಾಕರ್ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
