ಬೆಂಗಳೂರು:ಸಾರ್ವಜನಿಕ ಸ್ಥಳಗಳದಲ್ಲಿ ಅನಧಿಕೃತ ಬ್ಯಾನರ್ ಅಳವಡಿಸಿರುವ ಆರೋಪದ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಬೆಂಬಲಿಗರಿಗೆ ಬೆಂಗಳೂರು ಮಹಾನಗರ ಪಾಲಿಕೆ 50 ಸಾವಿರ ರೂ. ದಂಡ ವಿಧಿಸಿದೆ.
ಇದನ್ನೂ ಓದಿ:ರಾಜಕೀಯ ಅಖಾಡಕ್ಕೆ ಯೂಸುಫ್‌ ಪಠಾಣ್: ಟಿಎಂಸಿ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಕಣಕ್ಕೆ!
ನಗರದ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿಸ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ 50 ಸಾವಿರ ರೂ. ದಂಡ ವಿಧಿಸಲಾಗಿದೆ.
ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೇಸ್ ಅಭ್ಯರ್ಥಿ, ಕೆಪಿಸಿಸಿ ಕೋ-ಅರ್ಡಿನೇಟರ್ ಹಾಗೂ ಎಬಿಡಿ ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾಜೀವ್ ಗೌಡ ಅವರು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.
ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆ ವತಿಯಿಂದ ಅಧಿಕೃತವಾಗಿ ಅನುಮತಿ ಪಡೆದಿರುವುದಿಲ್ಲ. ಹೀಗಾಗಿ 50 ಸಾವಿರ ರೂ. ದಂಡ ವಿಧಿಸಿ ಪಾಲಿಕೆ ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ರವರು ಪತ್ರದ ಮೂಲಕ ಸೂಚಿಸಿದ್ದಾರೆ.
ರಾಜಕೀಯ ಅಖಾಡಕ್ಕೆ ಯೂಸುಫ್‌ ಪಠಾಣ್: ಟಿಎಂಸಿ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಕಣಕ್ಕೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
