ಬೆಂಗಳೂರು:ನಗರದಲ್ಲಿ ಡೆಂಘೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಉಚಿತವಾಗಿ ರಕ್ತ ನೀಡುವ ನಿಟ್ಟಿನಲ್ಲಿ ಲಯನ್ಸ್​ ಕ್ಲಬ್​ ಹಾಗೂ ಪೆಮ್​ ಕೋ ಸಂಸ್ಥೆ ಯ ಸಹಯೋಗದಲ್ಲಿ ಶಿಲ್ಪಾ ಫೌಂಡೇಷನ್​ ವತಿಯಿಂದ ಗುರುವಾರ ನಗರದಲ್ಲಿ ಬೃಹತ್​ ರಕ್ತದಾನ ಶಿಬಿರ ಆಯೋಜಿಸಿತ್ತು. ಅಂದಾಜು 500ಕ್ಕೂ ಅಧಿಕ ಐಟಿ ಉದ್ಯೋಗಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಶಿಬಿರದಲ್ಲಿ ಸಂಗ್ರಹವಾದ ರಕ್ತವನ್ನು ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್​ನಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ಡೆಂಘೆ ಜ್ವರದಿಂದ ಬಳಲುತ್ತಿರುವವರಿಗೆ ಉಚಿತವಾಗಿ ನೀಡಲಾಗುತ್ತದೆ.
ಎಲ್​ಕೆಕ್ಯೂ ಸಂಸ್ಥೆಯ ನಿರ್ದೇಶಕ ಕಿಶೋರ್​ ಮಾತನಾಡಿ, ಹಲವು ವರ್ಷಗಳಿಂದ ಶಿಲ್ಪಾ ಫೌಂಡೇಷನ್​ ಸಂಸ್ಥೆ ಸಮಾಜಮುಖಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ.ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ. ಹಲವು ಸಂಸ್ಥೆಗಳನ್ನು ಒಟ್ಟಿಗೆ ಸೇರಿಸಿ ಇಂತಹ ರಕ್ತದಾನ ಶಿಬಿರ ಸೇರಿ ಸಮಾಜಕ್ಕೆ ಅನಿವಾರ್ಯತೆವುಳ್ಳ ಕಾರ್ಯಕ್ರಮ ರೂಪಿಸುವ ಮೂಲಕ ಸೇವೆ ಸಲ್ಲಿಸುತ್ತಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.
ಮದ್ಯದ ದರ ಇಳಿಕೆ ತಿಕ್ಕಾಟ:ಶುಲ್ಕಇಳಿಸದಂತೆ ತಯಾರಿಕ ಕಂಪನಿಗಳ ಒತ್ತಡ
ಶಿಲ್ಪಾ ಫೌಂಡೇಷನ್​ ಸಂಸ್ಥಾಪಕ ಅಚ್ಚುತ್​ಗೌಡ ಮಾತನಾಡಿ, ನಮ್ಮ ಸಂಸ್ಥೆಯು 10 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆಯ ಮಹತ್ತರ ಜವಾಬ್ದಾರಿ ಹೊತ್ತುಕೊಂಡು ನಿರಂತರವಾಗಿ ಕೆಲಸ ಮಾಡುತ್ತಿದೆ. 10ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಿದ್ದು, ಬೃಹತ್​ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಕಾರ್ಯಕ್ಕೆ 50ಕ್ಕೂ ಹೆಚ್ಚು ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಿದ್ದೇವೆ. ನಗರದಲ್ಲಿ ಮೂರು ಸುಸಜ್ಜಿತ ಸ್ಮಾರ್ಟ್​ ಬಸ್​ ನಿಲ್ದಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದರು. ಫಿಡಲಿಟಸ್​ ಎಚ್​ಆರ್​ ಲ್ಯಾಬ್​ ನಿರ್ದೇಶಕಿ ಸುಹಾಸಿನಿ ದೇಶಪಾಂಡೆ, ಪರಿಸರ ತಜ್ಞ ಪ್ರಕೃತಿ ಪ್ರಸನ್ನ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
