ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಜುವೆಲ್ಲರಿ ಶಾಪ್​ಗೆ ಕನ್ನಹಾಕಿದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಆಭರಣ ದೋಚಿದ್ದಾರೆ.
ವೈಟ್​ಫೀಲ್ಡ್​​ನ ಇಮ್ಮಡಿಹಳ್ಳಿ ಮುಖ್ಯರಸ್ತೆಯ ಮಾತಾ ಜುವೆಲ್ಲರಿ ಮಳಿಗೆಯಲ್ಲಿ ಆ.5ರ ಬೆಳಗಿನ ಜಾವ ಈ ದುಷ್ಕೃತ್ಯ ನಡೆದಿದೆ. ಬರೋಬ್ಬರಿ 35 ಲಕ್ಷ ರೂ. ಮೌಲ್ಯದ 50 ಕೆಜಿ ಬೆಳ್ಳಿ ಆಭರಣಗಳನ್ನು ಖತರ್ನಾಕ್ ಕಳ್ಳರು ದೋಚಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿರಿರಾತ್ರೋರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ, ಅಪಾರ ಪ್ರಮಾಣದ ಮಾರಕಾಸ್ತ್ರ ವಶ
ಮಾತಾ ಜುವೆಲ್ಲರಿ ಮಳಿಗೆಯ ಪಕ್ಕದ ಗ್ರಂಧಿಗೆ ಅಂಗಡಿಯಿಂದ ಕಿಟಕಿ ಸರಳು ಮುರಿದು ಒಳನುಗ್ಗಿರುವ ಮೂವರು ಕಳ್ಳರು ಆಭರಣ ಮಳಿಗೆಯಲ್ಲಿ ಕನ್ನ ಕೊರೆದು ಆಭರಣ ಹೊತ್ತೊಯ್ದಿದ್ದಾರೆ. ಚಿನ್ನಾಭರಣದ ಲಾಕರ್ ಒಡೆಯಲಾಗದೇ ಬೆಳ್ಳಿ ಆಭರಣಗಳನ್ನು ಮಾತ್ರ ಕದ್ದೊಯ್ದಿದ್ದಾರೆ.
ಕಳ್ಳತನ ಕೃತ್ಯದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈಟ್​ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರಲ್ಲಿ ವಿದೇಶಿಗರಿದ್ದ 35 ಮನೆಗಳ ಮೇಲೆ ರಾತ್ರೋರಾತ್ರಿ ಸಿಸಿಬಿ ರೇಡ್​… ಬೆಚ್ಚಿ ಬೀಳಿಸುತ್ತೆ ಅಲ್ಲಿನ ಅಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
