ಬೆಂಗಳೂರು:ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಸೆಪ್ಟೆಂಬರ್ 1ರಿಂದ ಆರಂಭವಾಗಲಿದ್ದು 6,346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ 94,775 ಗ್ರಾಮ ಪಂಚಾಯಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ. ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ. ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ. ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5,234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1,112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ಹೇಳಿದ್ದಾರೆ.
ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 2024ರ ಅಕ್ಟೋಬರ್ 1ರಿಂದ ಅಕ್ಟೋಬರ್ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು. ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
