ಬೆಂಗಳೂರು:ನನೆಗುದಿ ಬಿದ್ದಿರುವ 545 ಪಿಎಸ್‌ಐ ನೇಮಕ ವಿಷಯ ಇನ್ನೆರೆಡು ವಾರಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗಿದ್ದು, ಅದನ್ನು ಬಗೆಹರಿಸಲಾಗುವುದು ಎಂದರು.
ನಟ ದರ್ಶನ್ ಜೊತೆ ಸಂಪರ್ಕದಲ್ಲಿದ್ದವರೆಲ್ಲ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ತನಿಖೆಯ ಹಂತದಲ್ಲಿ ದೊರೆಯುವ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮುಂದುವರೆಸುತ್ತಾರೆ. ಅಗತ್ಯವಾದರೆ ಸಂಪರ್ಕದಲ್ಲಿದ್ದವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಪೆಟ್ರೊಲ್, ಡೀಸೆಲ್ ಮಾರಾಟ ತೆರಿಗೆ ಹೆಚ್ಚಳದಲ್ಲಿ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ 14 ಬಾರಿ ಪೆಟ್ರೊಲ್, ಡೀಸೆಲ್ ದರವನ್ನು ಹೆಚ್ಚಿಸಿದರೂ ಅದನ್ನು ಮರೆತು ಹೋದಂತಿದೆ. ಕಚ್ಚಾತೈಲದ ಬೆಲೆ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಡಿಮೆಯಿದ್ದಾಗಲೂ ಬೆಲೆ ಹೆಚ್ಚಿಸಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು ಎಂದು ಹೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್‌ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ರಾಯ್‌ಬರೇಲಿ ಕ್ಷೆತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ರಾಹುಲ್ ಗಾಂಧಿ ಲೋಕಸಭೆಯ ವಿರೋಧಪಕ್ಷದ ನಾಯಕರಾಗಬೇಕು ಎಂಬುದು ನಮೆಲ್ಲರ ನಿರೀಕ್ಷೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
