ಬೆಂಗಳೂರು: ಕರ್ನಾಟಕದಲ್ಲಿ ಕರೊನಾ ಸೋಂಕಿಗೆ 5ನೇ ಬಲಿಯಾಗಿದೆ. ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಲಬುರಗಿಯ 65 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಇನ್ನೊಂದೆಡೆ ಬುಧವಾರ ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 181ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದೊಂದು ಕರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. 181 ಸೋಂಕಿತರಲ್ಲಿ ಈಗಾಗಲೇ ಐವರು ಮೃತಪಟ್ಟಿದ್ದು, 28 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
148 ರೋಗಿಗಳ ಪೈಕಿ ಒಬ್ಬರು ಗರ್ಭಿಣಿ ಸೇರಿದ್ದು, ಎಲ್ಲರನ್ನೂ ನಿಗದಿತ ಜಿಲ್ಲಾ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್​ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿ 43 ಆಕ್ಸಿಜನ್​ನಲ್ಲಿ ಹಾಗೂ ರೋಗಿ 101 ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
5 ದಿನ, 44 ಜನರಿಗೆ ಸೋಂಕು: ರಾಜ್ಯದಲ್ಲಿ ಬರೀ 5 ದಿನದಲ್ಲಿ 44 ಜನರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾ.4ರಂದು 7 ಜನ, ಮಾ.5ರಂದು 7 ಜನ, ಮಾ.6ಂದು 12, ಮಾ.7ರಂದು 12 ಹಾಗೂ ಮಾ.8ರಂದು 6 ಜನರಿಗೆ ಸೋಂಕು ದೃಢಪಟ್ಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.
ಹೊಸ ಸೋಂಕಿತರು
ರೋಗಿ-176
ಉ.ಕನ್ನಡದ 26 ವರ್ಷದ ಮಹಿಳೆ ತೀವ್ರ ಉಸಿರಾಟ ತೊಂದರೆ ಹೊಂದಿದ್ದು, ದುಬೈನಿಂದ ಬಂದವರೊಂದಿಗೆ ಸಂಪರ್ಕ ಹೊಂದಿದ್ದರು.
ರೋಗಿ-177
ಕಲಬುರಗಿಯ 65 ವರ್ಷದ ವ್ಯಕ್ತಿ ಮಂಗಳವಾರ ಸಾವು
ರೋಗಿ-178
ಕಲಬುರಗಿಯ 72 ವರ್ಷದ ವೃದ್ಧೆಗೆ ಸೋಂಕು ತಗುಲಿದೆ. ಇವರಿಗೆ ಮಗನಿಂದ (ರೋಗಿ 175) ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿ-179
ಮಂಡ್ಯದ 35 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ರೋಗಿಗಳಾದ 134 ಮತ್ತು 138 ಇವರ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ.
ರೋಗಿ-180
ಚಿಕ್ಕಬಳ್ಳಾಪುರದ 23 ವರ್ಷದ ವ್ಯಕ್ತಿಗೆ ಸೋಂಕು ಹರಡಿದೆ. ಈತ ದೆಹಲಿ ಪ್ರಯಾಣದ ಹಿನ್ನಲೆ ಹೊಂದಿದ್ದಾರೆ.
ರೋಗಿ-181
ಬೆಂಗಳೂರಿನ 27 ವರ್ಷದ ಮಹಿಳೆ ದೆಹಲಿ ಪ್ರಯಾಣದ ಹಿನ್ನಲೆ ಹೊಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿಯಲ್ಲಿ ಕರೊನಾಗೆ ಒಟ್ಟಾರೆ ಈವರೆಗೆ ಇಬ್ಬರು ಬಲಿಯಾಗಿದ್ದಾರೆ. 65 ವರ್ಷದ ಹಣ್ಣು ಮಾರುವ ವ್ಯಾಪಾರಿಯೊಬ್ಬ ಕಳೆದ ರಾತ್ರಿ ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಇವರಿಗೆ ಉಸಿರಾಟದ ತೊಂದರೆ ಮತ್ತು ಕರೊನಾ ಸೋಂಕು ಇತ್ತು ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ. ಈತ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಎರಡು ದಿನ ಮೊದಲು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿಯ ಸಂತ್ರಾಸವಾಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಸಿಂಗಾಪುರದ ಚಾಂಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​-2 ಕಾರ್ಯಾಚರಣೆ ಮೇ 1ರಿಂದ 18 ತಿಂಗಳು ಸ್ಥಗಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
