ಬೆಂಗಳೂರು:ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ ಸಿಬ್ಬಂದಿ ಪ್ರಸಕ್ತ ಹಣಕಾಸು ವರ್ಷದಲ್ಲಿ (2023 ಏಪ್ರಿಲ್ 1 ರಿಂದ ಡಿಸೆಂಬರ್ 31) 6,27,014 ಲಕ್ಷ ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಮೂಲಕ 46.31 ಕೋಟಿ ರೂ. ದಂಡ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.9.95 ಹೆಚ್ಚಳವಾಗಿದೆ. ಇದು ನೈರುತ್ಯ ರೈಲ್ವೆ ಪ್ರಾರಂಭವಾದಾಗಿನಿಂದ ಅತಿ ಹೆಚ್ಚು ದಂಡ ವಸೂಲಿ ಆಗಿದೆ.
ಟಿಕೆಟ್ ರಹಿತ ಮತ್ತು ಅನಿಯಮಿತ ಪ್ರಯಾಣವನ್ನು ತಡೆಯಲು ಎಕ್ಸ್​​ಪ್ರೆಸ್, ವಿಶೇಷ ರೈಲುಗಳು ಸೇರಿದಂತೆ ಪ್ರಯಾಣಿಕರ ರೈಲು ಸೇವೆಗಳಲ್ಲಿ ಎಲ್ಲಾ ಅಧಿಕೃತ ರೈಲು ಬಳಕೆದಾರರಿಗೆ ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಸೇವೆಗಳನ್ನು ನೀಡಲು ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಮಾಹಿತಿ ನೀಡಿದ್ದಾರೆ.
ಕಳೆದ ಡಿಸೆಂಬರ್​ನಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 72,041 ಪ್ರಕರಣಗಳನ್ನು ದಾಖಲಿಸಿ 5.13 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nine =
Remember me
