ಶಿವಮೊಗ್ಗ:ಕಾರ್​ ಶೋರೂಮ್​ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗದ ಶೇಷಾದ್ರಿಪುರಂನ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
#WATCH| Karnataka: Fire broke out in a car showroom last night in Shivamogga. Six vehicles were damaged in the fire.pic.twitter.com/SnWwhkOWFD
ಇದನ್ನೂ ಓದಿ:5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಖಚಿತಪಡಿಸಿಲ್ಲ. ಘಟನೆಯಲ್ಲಿ ಯಾರಿಗೂ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.
ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದು, ಇದಕ್ಕಾಗಿ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಬಳಕೆ ಮಾಡಿದರು. 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಭದ್ರಾವತಿ, ತರೀಕೆರೆ, ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಮಿಸಿದ ಅಗ್ನಿಶಾಮಕ ದಳದ ವಾಹನಗಳ ಮೂಲಕ ಬೆಂಕಿ ನಂದಿಸಲು ಸಹಕರಿಸಿದ್ದಾರೆ.
Fire accident in Shanker mutt road , Rahul Hundai show room#Shivamogga#shimogapic.twitter.com/XtFhXjpHUw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
