ಹನೂರು:ಅಂಗವಿಕಲತೆಯ ಶಾಪಕ್ಕೆ ಅರಳಬೇಕಿದ್ದ ಹೂವನ್ನು ಮೊಗ್ಗಿನಲ್ಲೇ ಚಿವುಟಲಾಗಿದೆ. ಮಮತೆಯಿಂದ ಮಡಿಲಿನಲ್ಲಿಟ್ಟುಕೊಂಡು ಪ್ರೀತಿ, ವಾತ್ಸಲ್ಯ, ಮಮಕಾರ ತೋರುವ ಬದಲು ತಿಂದವರು ಎಲೆ ಬಿಸಾಡೋ ಹಾಗೆ ಹೆತ್ತವರು ಮಗುವನ್ನು ಎಸೆದು ಹೋಗಿದ್ದಾರೆ.
ಹನೂರು ತಾಲೂಕಿನ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯ ಶವಾಗಾರ ಬಳಿಯ ಖಾಲಿ ನೀರಿನ ತೊಟ್ಟಿಯಲ್ಲಿ 6 ದಿನದ ಹಸುಗೂಸು ಅನಾಥ ಶವವಾಗಿ ಪತ್ತೆಯಾಗಿದೆ. ಅಂಗವೈಕಲ್ಯ ಹೊತ್ತುಕೊಂಡು‌ ಜನಿಸಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್​ನಲ್ಲಿ ಮಗುವನ್ನು ಹಾಕಿ ಬಿಸಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್​ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಲ್ಲಿ ಹೆರಿಗೆ ಮಾಡಿದ್ದರೆ ಕರುಳ ಬಳ್ಳಿ ಕತ್ತರಿಸಲಾಗಿರುತ್ತಿತ್ತು. ಆದರೆ ತೊಟ್ಟಿಯಲ್ಲಿ ಪತ್ತೆಯಾಗಿರುವ ಮಗುವಿನ ಕರುಳ ಬಳ್ಳಿಯನ್ನು ಕತ್ತರಿಸಿಲ್ಲ. ಹೀಗಾಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿಲ್ಲ ಎನ್ನಲಾಗುತ್ತಿದ್ದು, ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿ‌ ತನಿಖೆ ಕೈಗೊಂಡಿದ್ದಾರೆ.
ಹೋಟೆಲ್​ಗೆ ಬೀಗ ಹಾಕಿ ಒಳಗಡೆ ವೇಶ್ಯಾವಾಟಿಕೆ! ಪೊಲೀಸರಿಗೆ ಸಿಕ್ಕಿಬಿದ್ದ 8 ಯುವಕರು, ಇಬ್ಬರು ಯುವತಿಯರು

ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
