ಹಾಸನ:ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿರುವ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತರೆಲ್ಲರೂ ಚಿಕ್ಕಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಬೆಂಗಳೂರು ರೇವ್​ ಪಾರ್ಟಿ ಕೇಸ್​; ನಟಿ ಹೇಮಾ ಪರ ಸಿಸಿಬಿಗೆ ರಾಜಕಾರಣಿಗಳಿಂದ ನಿರಂತರ ಒತ್ತಡ!
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಂಗಳೂರಿನಲ್ಲಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿ ವಾಪಸ್​ ಊರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಕಾರಳ್ಳಿ ಗ್ರಾಮದ ನಾರಾಯಣಪ್ಪ, ಸುನಂದಾ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂದರಹಳ್ಳಿ ಗ್ರಾಮದ ನೇತ್ರಾ ಹಾಗೂ ರವಿಕುಮಾರ್ ದಂಪತಿ ಹಾಗೂ ಪುತ್ರ ಚೇತನ್ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.
ಪಾಶ್ವವಾಯುಗೆ ತುತ್ತಾಗಿದ್ದ ನಾರಾಯಣಪ್ಪ ಅವರಿಗೆ ಚಿಕಿತ್ಸೆ ಕೊಡಿಸಲೆಂದು KA-53-C. 1419 ನಂಬರ್​ನ ಇಟಿಯೋಸ್​ ಬಾಡಿಗೆ ಕಾರು ಮಾಡಿಕೊಂಡು ಮಂಗಳೂರಿಗೆ ಹೋಗಿದ್ದರು. ಚಿಕಿತ್ಸೆ ಪಡೆದು ವಾಪಸ್ಸು ಬೆಂಗಳೂರಿನ ಕಡೆಗೆ ಬರುವಾಗ ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್​ಗೆ ಹಾರಿ ಕಂಟೇನರ್​ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 3 =
Remember me
