ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿ9 ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬಿಡಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮೃತರು ಧಾರವಾಡ ಜಿಲ್ಲೆಯವರು ಎಂದು ತಿಳಿದು ಬಂದಿದೆ. ಮದುವೆ ಆರತಕ್ಷತೆಗೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಪೊಲೀಸರ ಜೊತೆ ರೈತರ ಘರ್ಷಣೆ; ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಹಲವರ ಬಂಧನ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವೇಗವಾಗಿ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಆ ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರು ಗೋಲಿಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದುಮ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 14 =
Remember me
