
ಬೆಂಗಳೂರು:ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ವಿಷಯದಲ್ಲಿ ದಿಲ್ ಖುಷಿಯಲ್ಲಿರುವ ಜೆಡಿಎಸ್‌ಗೆ ಈಗ ವಿಧಾನ ಪರಿಷತ್ ಚುನಾವಣಾ ತಲೆಬೇನೆ ಶುರುವಾಗಿದೆ.ಶಿಕ್ಷಕರು ಮತ್ತು ಪದವಿಧರರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸ್ಥಾನ ಹೊಂದಾಣಿಕೆ ಮಾತುಕತೆಗಳು ನಡೆಯುತ್ತಿವೆದ್ದರೂ, ಯಾವುದೂ ಇನ್ನೂ ಅಂತಿಮರೂಪ ಪಡೆದುಕೊಂಡಿಲ್ಲ.6 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ನಲ್ಲಿ 5 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅವರುಗಳು ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಇನ್ನೂ ಹೊಂದಾಣಿಕೆಯ ಕಸರತ್ತು ನಡೆಸುತ್ತಲೇ ಇವೆ.ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನಲ್ಲಿಯೂ ಜೆಡಿಎಸ್ ನಮ್ಮ ಜೊತೆಗೆ ಸಹಕರಿಸಲಿ ಎನ್ನುವುದು ಬಿಜೆಪಿ ಇರಾದೆಯಾಗಿದೆ. ಈ ಹಿನ್ನೆಲೆಯಲ್ಲಿಯೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡುವುದು ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮರಿತಿಬ್ಬೇಗೌಡ, ದಕ್ಷಿಣ ಪಶ್ಚಿಮ ಕ್ಷೇತ್ರದಲ್ಲಿ ಬೋಜೇಗೌಡ ಅವರು ಜೆಡಿಎಸ್ ಪ್ರತಿನಿಧಿಸಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದ್ದರಿಂದ ಈ ಎರಡೂ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎನ್ನುವುದು ಜೆಡಿಎಸ್‌ನ ಪ್ರತಿವಾದವಾಗಿದೆ.ಚುನಾವಣೆ ನಡೆಯಲಿರುವ 6 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲು ಬಿಜೆಪಿ ಸಹಮತವಿದೆ. ಆದರೆ, ಎರಡು ಸ್ಥಾನ ನೀಡುವ ಬಗ್ಗೆ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗ ಬಯಸಿರುವ ಆಕಾಂಕ್ಷಿಗಳು ಬಿರುಸಿನ ಪ್ರಯತ್ನ ಮಾಡಲು ಈ ಹೊಂದಾಣಿಕೆ ರಾಜಕಾಣ ಅಡ್ಡಿಯಾಗಿದೆ.ಕರಾವಳಿ ಭಾಗದಲ್ಲಿ ಬಿಜೆಪಿ ಭದ್ರ ನೆಲೆಯನ್ನು ಹೊಂದಿರುವ ಕಾರಣ ಬೋಜೇಗೌಡರು ಪ್ರತಿನಿಧಿಸುತ್ತಿರುವ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವುದಕ್ಕೆ ಜೆಡಿಎಸ್ ಚಿಂತಿಸುತ್ತಿದೆ. ಆದರೆ, ಈ ಕ್ಷೇತ್ರ ಬಿಟ್ಟುಕೊಟ್ಟರೆ, ಬೆಂಗಳೂರು ಪದವಿಧರರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಿ ಎನ್ನುವ ಬೇಡಿಕೆಯನ್ನು ಮುಂದಿಟ್ಟಿದೆ. ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಂಗನಾಥ್ ಅವರನ್ನು ಅಭ್ಯರ್ಥಿ ಎಂದು ಜೆಡಿಎಸ್ ೋಷಿಸಿದ್ದು, ಅವರನ್ನು ಬದಲಿಸಲು ಜೆಡಿಎಸ್ ಒಪ್ಪುತ್ತಿಲ್ಲ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪುಟ್ಟಣ್ಣ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಜೆಡಿಎಸ್‌ನಿಂದ ಗೆದ್ದಿದ್ದ ಪುಟ್ಟಣ್ಣ ಬಿಜೆಪಿಗೆ ಸೇರಿ ಗೆದ್ದು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಪುಟ್ಟಣ್ಣ ಕಾಂಗ್ರೆಸ್‌ಗೆ ಹೋದ ಕಾರಣ, ಅಲ್ಲಿ ಜೆಡಿಎಸ್‌ಗೆ ಪ್ರಬಲ ಅಭ್ಯರ್ಥಿ ಕೊರತೆ ಇದೆ. ಹಾಗಾಗಿಯೇ ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲು ಒಲವು ತೋರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ಎನ್‌ಡಿಎ ಭಾಗವಾಗಿ ಜೆಡಿಎಸ್ ಕೂಡ ಸೇರ್ಪಡೆಯಾಗಿರುವ ಕಾರಣ, ಅವರ ಜೊತೆಗೆ ಮಾತುಕತೆ ನಡೆಸಿ ಹೊಂದಾಣಿಕೆಯಲ್ಲಿಯೇ ಸ್ಪರ್ಧೆ ಮಾಡುವುದು ಒಳ್ಳೆಯದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.
ಪ್ರೆಂಡ್ಲಿ ೈಟ್‌ಗೆ ಎಚ್ಡಿಕೆ ಒಲವುಪದವಿಧರರು ಮತ್ತು ಶಿಕ್ಷಕರ ಕ್ಷೇತ್ರದಲ್ಲಿನ ರಾಜಕಾರಣವೇ ಬೇರೆ ರೀತಿ ಇದೆ. ಆದ್ದರಿಂದ ನಮ್ಮ ಪಾಡಿಗೆ ಪ್ರತ್ಯೇಕವಾಗಿಯೇ ಚುನಾವಣೆ ಸ್ಪರ್ಧೆ ಮಾಡೋಣ ಎನ್ನುವ ಸಲಹೆಯನ್ನು ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಂದಿರಿಸಿದ್ದಾರೆ. ನಮಗೆ ಅನುಕೂಲವಾಗಿರುವ ಕಡೆಯಲ್ಲಿ ನಿಮ್ಮ ಕಡೆಯಿಂದ ಸಹಕಾರ ನೀಡಿ, ನಿಮ್ಮ ಅಭ್ಯರ್ಥಿ ಪ್ರಬಲವಾಗಿರುವ ಕಡೆಯಲ್ಲಿ ನಾವು ವೀಕ್ ಕ್ಯಾಂಡಿಟೇಟ್ ಹಾಕಿ ಸಹಕಾರ ಕೊಡುತ್ತೇವೆ ಎನ್ನುವ ಮಾಹಿತಯನ್ನು ಬಿಜೆಪಿಗೆ ರವಾನಿಸಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಹೈಕಮಾಂಡ್ ಅಭಿಪ್ರಾಯ ಪಡೆದು ಮುಂದೆ ಹೆಜ್ಜೆ ಇಡಲು ಬಿಜೆಪಿ ನಿರ್ಧರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
