ಚಿಕ್ಕಬಳ್ಳಾಪುರ:ಅಮ್ಮನ ಪ್ರಿಯಕರನಿಂದಲೇ 6 ವರ್ಷದ ಮಗು ಕೊಲೆಯಾಗಿರುವ ಘಟನೆ ಗೌರಿಬಿದನೂರು ತಾಲೂಕಿನಲ್ಲಿ ಸಂಭವಿಸಿದೆ.
ವಾಟದಹೊಸಹಳ್ಳಿಯ ನಾರಾಯಣಸ್ವಾಮಿ ಮತ್ತು ಪ್ರಭಾವತಿ ದಂಪತಿಯ ಮಗು ವಿಷ್ಣುವರ್ಧನ್(6) ಮೃತ ದುರ್ದೈವಿ. ಮಾ.16ರಂದು ವಿಷ್ಣುವರ್ಧನ್ ನಾಪತ್ತೆಯಾಗಿದ್ದ. ಎಲ್ಲ ಕಡೆ ಹುಡುಕಾಡಿದ ಪಾಲಕರು ಪೊಲೀಸ್​ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣದ ಬೆನ್ನಹತ್ತಿದ ಪೊಲೀಸರು ರಾಮಾಂಜಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಫೋಟಕ ರಹಸ್ಯ ಬಯಲಾಗಿದೆ.ಇದನ್ನೂ ಓದಿರಿಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ
ಮೃತ ಮಗುವಿನ ತಾಯಿ ಜತೆ ರಾಮಾಂಜಿ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಬೇರೆಯಾಗಿದ್ದರು. ಅದೇ ಸಿಟ್ಟಿನಲ್ಲಿದ್ದ ರಾಮಾಂಜಿ, ಮತ್ತೆ ಪ್ರಭಾವತಿಯನ್ನ ಓಲೈಸಿಕೊಳ್ಳಲು ಆಕೆಯ ಮಗನನ್ನೇ ಕಿಡ್ನ್ಯಾಪ್ ಮಾಡಿದ್ದ. ಮಗ ನಾಪತ್ತೆಯಾಗಿದ್ದಾನೆ ಎಂದು ಪ್ರಭಾವತಿ ಮತ್ತು ನಾರಾಯಣಸ್ವಾಮಿ ಇತ್ತ ದೂರು ಕೊಟ್ಟಿದ್ದರು. ಇದರಿಂದ ಕೆರಳಿದ ರಾಮಾಂಜಿ, ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿ ಮೂಟೆಯಲ್ಲಿ ತುಂಬಿ ಸಾದರ್ಲಹಳ್ಳಿ ಬಳಿ ಬಿಸಾಡಿದ್ದ.
ಪೊಲೀಸ್​ ವಿಚಾರಣೆ ವೇಳೆ ಸತ್ಯ ಬಯಲಾಗಿದ್ದು, ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾಲಕ ಅಸ್ಥಿಪಂಜರ ಪತ್ತೆಯಾಗಿದೆ. ಆರೋಪಿ ರಾಮಾಂಜಿಯನ್ನ ಗೌರಿಬಿದನೂರು ಪೊಲೀಸರು ಬಂಧಿಸಿದ್ದಾರೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಬಂಡೀಪುರದಲ್ಲಿ ಹಸಿವಿನಿಂದ ನರಳುತ್ತಲೇ ಪ್ರಾಣಬಿಟ್ಟ 3 ಹುಲಿಮರಿಗಳು!

ಬೆಳಗಾವಿ ಲೋಕಸಭೆ ಉಪಚುನಾವಣೆ: ಡಿಕೆಶಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
