ಬಾಗಲಕೋಟೆ:ಚುನಾವಣೆ ಹಿನ್ನೆಲೆ ಪೊಲೀಸ್​ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಅಗತ್ಯಕ್ಕಿಂತ ಹೆಚ್ಚಿನ ವಸ್ತುಗಳನ್ನು ಸಾಗಿಸುತ್ತಿದ್ದ ಹಾಗೂ ಸರಿಯಾದ ದಾಖಲೆಗಳಿಲ್ಲದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ. ಇಸ್ತ್ರಿ ಪೆಟ್ಟಿಗೆಗಳನ್ನ ಸಾಗಿಸ್ತಿದ್ದ ಕ್ಯಾಂಟರ್ ವಾಹನದ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಾಗಲಕೋಟೆ ಎಸ್.ಪಿ ಜಯಪ್ರಕಾಶ್ ನೇತೃತ್ವದ ತಂಡ ಬಾಗಲಕೋಟೆ ನಗರದ ಹೊರವಲಯದ ಮಹಾರುದ್ರಪ್ಪನ ಹಳ್ಳದ ಬಳಿ ವಾಹನವೊಂದರ ಮೇಲೆ ದಾಳಿ ನಡೆಸಿದೆ. ಬರೋಬ್ಬರಿ 6798 ಇಸ್ತ್ರಿ ಪೆಟ್ಟಿಗೆಗಳಿರುವ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. 60 ಲಕ್ಷ  ರೂ. ಬೆಲೆಬಾಳುವ ಇಸ್ತ್ರಿ ಪೆಟ್ಟಿಗೆಗಳನ್ನ ಸೀಜ್ ಮಾಡಲಾಗಿದೆ.
ಇದನ್ನೂ ಓದಿ:BJP ಅಭ್ಯರ್ಥಿಗೆ ಸೇರಿದ 3 ಕೋಟಿ ಮೊತ್ತದ ಕುಕ್ಕರ್,ಗಡಿಯಾರ,ಪಾತ್ರೆಗಳು GST ಅಧಿಕಾರಿಗಳ ವಶಕ್ಕೆರಾಜಕೀಯ ನಾಯಕರಿಗೆ ಸೇರಿದ ಇಸ್ತ್ರಿ ಪೆಟ್ಟಿಗೆಗಳು ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ವಾಹನದ ಚಾಲಕನ ಬಳಿ ಸರಿಯಾದ ಬಿಲ್ ಇರಲಿಲ್ಲ. ಮತದಾರರಿಗೆ ಆಮಿಶ ಒಡ್ಡಲು ಇಸ್ತ್ರಿ ಪೆಟ್ಟಿಗಳನ್ನ ತರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಈ ಕುರಿತಾಗಿ ತನಿಖೆ ಆರಂಭಿಸಿದ್ದಾರೆ.
ಶ್ರೀಲಂಕಾದಿಂದ ತಂದು ನೆಟ್ಟʻಮರʼಕ್ಕಿದೆ ಹೈ ಸೆಕ್ಯುರಿಟಿ; ಈ ವೃಕ್ಷದ ಇತಿಹಾಸ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nine =
Remember me
