ಕೋಲಾರ:ಅರವತ್ತು ವರ್ಷದ ಮುದುಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರದ ಗ್ರಾಮವೊಂದರಲ್ಲಿ ಈ ಪ್ರಕರಣ ನಡೆದಿದ್ದು, ಗ್ರಾಮಾಂತರ ಠಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿನ ಗ್ರಾಮ ಪಂಚಾಯತ್​ವೊಂದರ ಸದಸ್ಯ ಕುಮಾರ್ ಎಂಬಾತನ ತಂದೆ ತಿಮ್ಮಪ್ಪ ಆರೋಪಿ. ಬುಧವಾರ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ, ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿದ ಮುದುಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ತಾಯಿ ಮರಳಿದ ಬಳಿಕ ವಿಷಯ ಗೊತ್ತಾಗಿದೆ.
ಆರೋಪಿಯ ಪುತ್ರ, ಗ್ರಾಮ ಪಂಚಾಯತ್ ಸದಸ್ಯನೂ ಆಗಿರುವ ಕುಮಾರ್ ಈ ಬಗ್ಗೆ ಪೊಲೀಸರಿಗೆ ದೂರು ನೀಡದಂತೆ ಬಾಲಕಿಯ ಮನೆಯವರಿಗೆ ಬೆದರಿಕೆಯನ್ನೂ ಒಡ್ಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿ ಈ ಪ್ರಕರಣ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬಾಲಕಿಯನ್ನು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮದ್ವೆಯಾದ ಮೂರೇ ದಿನಕ್ಕೆ ಪ್ರೇಮಿಗಳನ್ನು ದೂರ ಮಾಡಿದ್ರಾ ಪೊಲೀಸರು?; ಈ ದಾಂಪತ್ಯದಲ್ಲೀಗ ‘ಚೈತನ್ಯ’ವೂ ಇಲ್ಲ, ‘ತೇಜಸ್ಸೂ’ ಇಲ್ಲ..!

ಮುಂದೆ ನಮಗೇನೇ ಆದರೂ ಮನೆಯವರೇ ಕಾರಣ; ವಿರೋಧದ ನಡುವೆ ಅಂತರ್ಜಾತಿ ವಿವಾಹವಾಗಿ ವಿಡಿಯೋ ಹರಿಬಿಟ್ಟ ಪ್ರೇಮಿಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
