ಬೆಂಗಳೂರು:ವೃದ್ಧೆಯ ಕೈ, ಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಶವವನ್ನು ಡ್ರಮ್‌ನಲ್ಲಿ ತುಂಬಿ ಬೀದಿಗೆ ಬಿಸಾಡಿ ಪರಾರಿಯಾಗಿರುವ ಘಟನೆ ನಗರದ ಕೆಆರ್ ಪುರಂ ವ್ಯಾಪ್ತಿಯಲ್ಲಿ ನಡೆದಿದೆ.
ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಮೃತ ವೃದ್ಧೆಯನ್ನು ಕೆ.ಆರ್. ಪುರದ ನಿಸರ್ಗ ಲೇಔಟ್ ನಿವಾಸಿ ಸುಶೀಲಮ್ಮ (65) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ವೃದ್ಧೆಯ ಪರಿಚಿತ ದಿನೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಸರ್ಗ ಲೇಔಟ್‌ನ ಮನೆಗಳ ಓಣಿಯಲ್ಲಿ 10 ಲೀಟರ್ ಸಾಮರ್ಥ್ಯದ ಡ್ರಮ್ ಗಮನಿಸಿದ ಸ್ಥಳೀಯರು, ಅದರ ಬಳಿ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಸುಶೀಲಮ್ಮ, 10 ವರ್ಷಗಳಿಂದ ನಿಸರ್ಗ ಲೇಔಟ್‌ನಲ್ಲಿ ನೆಲೆಸಿದ್ದರು. ಇವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 8 ಲಕ್ಷ ರೂ.ಗೆ ಮನೆ ಬೋಗ್ಯಕ್ಕೆ ಪಡೆದು, ಮಕ್ಕಳಿಂದ ಪ್ರತ್ಯೇಕವಾಗಿ ವಾಸವಾಗಿದ್ದರು.
ಇದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಸಮೀಪದಲ್ಲೇ ಮಗ ನೆಲೆಸಿದ್ದ. ಪುತ್ರ ಪ್ರತಿ ತಿಂಗಳು ತಾಯಿಗೆ 2-3 ಸಾವಿರ ರೂ. ನೀಡುತ್ತಿದ್ದರು. ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿದ್ದ ಸುಶೀಲಮ್ಮಗೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ಅಜ್ಜಿಗೆ ಮನೆಗೆ ಬಂದು ಹೋಗುತ್ತಿದ್ದ. ಈ ಹತ್ಯೆಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ.
ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ, ವೈಟ್‌ಫೀಲ್ಡ್ ಡಿಸಿಪಿ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೆ.ಆರ್.ಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಜ್ಞಾನವಾಪಿ: ಹೈಕೋರ್ಟ್‌ನಿಂದ ಮಸೀದಿ ಸಮಿತಿಗೆ ಶಾಕ್, ನೆಲಮಾಳಿಗೆಯಲ್ಲಿ ಮುಂದುವರಿಯಲಿದೆ ವ್ಯಾಸ್ ಜಿ ಪೂಜೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + six =
Remember me
