ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ 8 ಜಿಲ್ಲೆಗಳಲ್ಲಿವೆ. ಈ ಜಿಲ್ಲೆಗಳಲ್ಲಿ ಸೋಂಕಿನ ಇಳಿಕೆಯ ಪ್ರಮಾಣ ಕಡಿಮೆ ಇದೆ. ಆದ್ದರಿಂದ ಪಾಸಿಟಿವಿಟಿ ದರವನ್ನು ಶೇ. 5 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿದ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ ಈ 8 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಜೊತೆಗೆ ಮೈಸೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗಿರುವ ಕುರಿತು ಸಿಎಂ ಕಳವಳ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸುವಂತೆ ತಿಳಿಸಿದರು.
ಇದನ್ನೂ ಓದಿ:ವಿವಿಧ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡರೆ ಹಣ ನೇರ ಬ್ಯಾಂಕ್‌ಗೆ, ಇಲ್ಲಿದೆ ನೋಡಿ ಡಿಟೇಲ್ಸ್‌
ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಅತಿ ಹೆಚ್ಚು, ಅಂದರೆ ಸರಾಸರಿ ಶೇ. 25.17 ಪಾಸಿಟಿವಿಟಿ ದರ ದಾಖಲಾಗಿದೆ. ಮೈಸೂರಿನಲ್ಲಿ ಶೇ. 22 ರಷ್ಟಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ 6.1 ಸಂಪರ್ಕಿತರನ್ನು ಪತ್ತೆಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಸಿಎಂ ಹೇಳಿದರು.
ಕೋವಿಡ್ 19 ನಿಯಂತ್ರಣ ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವುದನ್ನು ಖಾತರಿಪಡಿಸಬೇಕು. ಜನರು ನಿರ್ಬಂಧಗಳನ್ನು ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಮೈಕ್ರೋ ಕಂಟೇನ್‍ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಒತ್ತು ನೀಡಬೇಕು. ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾಗಿ ಪಾಸಿಟಿವಿಟಿ ರೇಟ್ ಶೇಕಡ 5 ರ ಒಳಗಿರುವಂತೆ ಖಾತರಿ ಪಡಿಸಬೇಕು ಎಂದು ಬಿಎಸ್​ವೈ ಸೂಚಿಸಿದರು.
ಇದನ್ನೂ ಓದಿ:ಲಾಕ್​ಡೌನ್​ ವಿಸ್ತರಿಸಿ ಅಂತೀರಾ, ಆರ್ಥಿಕತೆ ಸುಧಾರಣೆಗೆ ಏನಪ್ಪಾ ಮಾಡೋದು? ಸಚಿವರಿಗೆ ಸಿಎಂ ಪ್ರಶ್ನೆ
ಬೆಳಗಾವಿ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ರಾಪಿಡ್ ಆಂಟಿಜೆನ್ ಟೆಸ್ಟ್ ಜಾಸ್ತಿ ಮಾಡಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಶೇ. 30 ರಷ್ಟು ನಡೆಸಲು ಸೂಚಿಸಲಾಯಿತು. ಉಳಿದ ಶೇ. 70 ರಷ್ಟು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಬೇಕು. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ರಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ವರದಿ 24 ಗಂಟೆಗಳ ಒಳಗೆ ನೀಡಬೇಕು, ಸೋಂಕಿತರ ಆರೋಗ್ಯ ಸ್ಥಿತಿಗನುಗುಣವಾಗಿ ವರ್ಗೀಕರಣ ಮಾಡುವ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು ಎಂದರು.
ಸಂಪರ್ಕಿತರ ಟ್ರೇಸಿಂಗ್ ಹೆಚ್ಚಿಸಲು ಸೂಚಿಸಿದ ಸಿಎಂ, ಎಲ್ಲ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಸೂಚಿಸಿದರು. ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಟ ಸುಶಾಂತ್​ ಸಿಂಗ್ ಬಗೆಗಿನ ಚಲನಚಿತ್ರ ಬಿಡುಗಡೆಗೆ ತಡೆ ಇಲ್ಲ
ಮಕ್ಕಳಿಗೆ ಕರೊನಾ ಚಿಕಿತ್ಸೆ : ರೆಮ್​ಡೆಸಿವಿರ್ ಬೇಡ, ಸ್ಟಿರಾಯ್ಡ್ ಬಳಕೆಯಲ್ಲಿ ಇರಲಿ ಎಚ್ಚರ
ಜನರಿಗೆ ಮತ್ತೊಂದು ಶಾಕ್​ : ಪ್ರತಿ ಯುನಿಟ್​​ಗೆ 30 ಪೈಸೆ ವಿದ್ಯುತ್ ದರ ಏರಿಕೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
