ಬೆಂಗಳೂರು:ಕನ್ನಡ ನಾಡಿನಾದ್ಯಂತ ಇಂದು 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಮಸ್ತ ಕನ್ನಡಿಗರಿಗೆ ಟ್ವೀಟ್​ ಮೂಲಕ ಶುಭಕೋರಿದ್ದಾರೆ.
ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್​ ಮಾಡಿ ಶುಭಕೋರುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
— Narendra Modi (@narendramodi)November 1, 2020

ಒಂದಾಗಲು ಸಿಎಂ ಬಿಎಸ್​ವೈ ಕರೆಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಸಿಎಂ ಬಿಎಸ್​ವೈ ಶುಭ ಹಾರೈಸಿದ್ದಾರೆ.
ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!pic.twitter.com/ettDDO3l0e
— B.S.Yediyurappa (@BSYBJP)November 1, 2020

ನಾನು ಮೊದಲು ಕನ್ನಡಿಗ ಅಂದ್ರು ಮಾಜಿ ಸಿಎಂಕನ್ನಡ ರಾಜ್ಯೋತ್ಸವ ಎಂದರೆ ನಮ್ಮ ಜನ, ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ. ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡ ಮೊದಲು, ನಾನು ಮೊದಲು ಕನ್ನಡಿಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.
ಕನ್ನಡ ರಾಜ್ಯೋತ್ಸವ ಎಂದರೆ..ನಮ್ಮ ಜನ,ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ.
ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ.
ಕನ್ನಡ ಮೊದಲು,ನಾನು ಮೊದಲು ಕನ್ನಡಿಗ.#ಕನ್ನಡರಾಜ್ಯೋತ್ಸವpic.twitter.com/4mhVmi1DQ4
— Siddaramaiah (@siddaramaiah)November 1, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
