ಬೆಂಗಳೂರು:ಕರೊನಾ ವೈರಸ್​ ಹಿನ್ನೆಲೆಯಲ್ಲಿ 65ನೇ ಕನ್ನಡ ರಾಜ್ಯೋತ್ಸವವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ, ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಿಎಂ ಬಿಎಸ್​ವೈ, ದೇಶದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿಸುವುದು ಸರ್ಕಾರದ ಗುರಿಯಾಗಿದೆ. ಸರ್ಕಾರದ ಪ್ರತಿ ಕಾರ್ಯದಲ್ಲೂ ಕನ್ನಡ ಅಳವಡಿಕೆಗೆ 2021ರ ಅಕ್ಟೋಬರ್ 31ರ ವರೆಗೆ ಕನ್ನಡ ಕಾಯಕ ವರ್ಷ ಆಚರಿಸಲಾಗುತ್ತದೆ. ಅದರ ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿ ಅದನ್ನು ಪ್ರಕಟಿಸಲಾಗುತ್ತದೆ ಎಂದರು.
ಇದಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇನ್ನು ಪ್ರತಿವರ್ಷ ಕಂಠೀರವ ಸ್ಟೇಡಿಯಂನಲ್ಲಿ 20 ಸಾವಿರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ, ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಕೇವಲ ನೂರು ಜನರಿಗೆ ಮಾತ್ರ ಅವಕಾಶ‌ ನೀಡಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + 5 =
Remember me
