– 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳು ಸುಟ್ಟು ಕರಕಲು
ಕಾರವಾರ:ಜಾನುವಾರುಗಳಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶಾರ್ಟ್ ಸರ್ಕಿಟ್​​ನಿಂದ 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳುಗಳು ಸಾವನ್ನಪ್ಪಿವೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರನಲ್ಲಿ ನಡೆದಿದೆ.
ಇದನ್ನೂ ಓದಿ:ಅಣ್ಣನ ಮಗಳನ್ನು ಮದುವೆಯಾದ ಯುವಕ; ಈ ವಿವಾಹಕ್ಕೆ ಗ್ರಾಮಸ್ಥರಿಂದ ವಿರೋಧ
ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರ ಓಣೆಯ ಮಂಜುನಾಥ ಶೇಟ್ ಎಂಬುವರಿಗೆ ಸೇರಿದ ಜಾನುವಾರುಗಳು ಸುಟ್ಟು ಕರಕಲಾಗಿವೆ. ಎಂದಿನಂತೆ ಮನೆಯವರು ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಮೇವು ಹಾಕಿ ಕಟ್ಟಿದ್ದಾರೆ ಗುರುವಾರ ನಸುಕಿನ ಮೂರು ಗಂಟೆಯ ಸುಮಾರಿಗೆ ಆಕಸ್ಮಿಕವಾಗಿ ಕೊಟ್ಟಿಗೆಯಲ್ಲಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಕಟ್ಟಿಗೆ ಹಂಚುಗಳು ಸಿಡಿಯುತ್ತಿರುವ ಶಬ್ದ ಕೇಳಿ ಕೂಡಲೆ ಅಕ್ಕ ಪಕ್ಕದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ:ಲವರ್ಸ್ ಕಿರಿಕ್; ಡೆತ್ ನೋಟ್​​​ನಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ಪ್ರಾಣ ಬಿಟ್ಟ ಯುವತಿ
ರಾತ್ರಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳುಗಳ ಸಜೀವ ದಹನವಾಗಿವೆ.
ಮಾಲೀಕರು ಕಣ್ಣೀರು ಹಾಕಿದ್ದಾರೆ. ಕಂದಾಯ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಲವರ್ಸ್ ಕಿರಿಕ್; ಡೆತ್ ನೋಟ್​​​ನಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ಪ್ರಾಣ ಬಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
