ಬೆಂಗಳೂರು:ಹಗಲು ಮತ್ತು ರಾತ್ರಿ ವೇಳೆ ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿ 7 ಲಕ್ಷ ರೂ. ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇರ್ಫಾನ್​​ ಪಾಷ ಮತ್ತು ರೊಹಿಬ್ ಖಾನ್ ಬಂಧಿತರು. ನಂಜಾಂಬ ಅಗ್ರಹಾರದ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಬಗ್ಗೆ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಇಬ್ಬರು ಆರೋಪಿಗಳನ್ನು ಬಂಧಿಸಿ ಹತ್ತು ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಈ ಮೊದಲು ರಾಜಾಜಿನಗರ, ಚಂದ್ರಾಲೇಔಟ್, ಅಶೋಕನಗರ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ಬಂಧಿತರಾಗಿ ಜಾಮೀನನ ಮೇಲೆ ಬಿಡುಗಡೆಯಾಗಿ ಹೊರ ಬಂದ ನಂತರವು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿ ಕೆ.ಜಿ.ನಗರ, ಚಾಮರಾಜಪೇಟೆ, ಸುದ್ದುಗುಂಟೆಪಾಳ್ಯ, ಹೆಬ್ಬುಗೋಡಿ, ಎಸ್.ಜೆ.ಪಾರ್ಕ್, ಕೆಂಗೇರಿ, ವಿಜಯನಗರ, ಬ್ಯಾಟರಾಯನಪುರ, ಸಿ.ಕೆ.ಅಚ್ಚುಕಟ್ಟು, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಿಂದ ಇಲ್ಲಿವರೆಗೂ ಕಳ್ಳತನ ಮಾಡಿರುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುವ ಚಾಳಿ ಹೊಂದಿರುವುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಸಾಡೋಕೆ ಅಂತ ಇಟ್ಟಿರೋ ಪ್ಲಾಸ್ಟಿಕ್​ ಬಾಟಲಿ​ ಬಳಸಿ ನಿರ್ಮಾಣವಾದ ಬಸ್‌ ನಿಲ್ದಾಣವಿದು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 18 =
Remember me
