ಬೆಂಗಳೂರು:ರಾಜ್ಯದಲ್ಲಿ  ಕೆಲವು ದಿನಗಳ ಅವಧಿಯಲ್ಲಿ ಡೆಂಗೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸುಮಾರು 7 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.‌ ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ!
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಅಧಿಕಾರಿಗಳ ಸಭೆ ನಡೆಸಿಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡೆಂಗೆ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
ಬೆಂಗಳೂರಿನಲ್ಲಿ ಔಷಧ ಸಿಂಪಡಣೆಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸ್ವಚ್ಚತೆಗೆ ಆದ್ಯತೆ ನೀಡಿಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಚ್ಚರಿಕೆ ಸಂದೇಶವನ್ನೂ ಸಿಎಂ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
