ಬೆಂಗಳೂರು: ಲಾಕ್​ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕೈಗಾರಿಕೆಗಳಲ್ಲಿ ಶೇ.70 ಪುನಾರಂಭಗೊಂಡಿದ್ದು, ಇನ್ನುಳಿದ ಶೇ.30 ಕೈಗಾರಿಕೆಗಳ ಪ್ರಾರಂಭಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಕೈಗಾರಿಕೆಗಳ ಕುರಿತಾದ ಪ್ರಸ್ತುತ ಪರಿಸ್ಥಿಯ ಕುರಿತು ಸಿಎಂಗೆ ಮನವರಿಕೆ ಮಾಡಿಕೊಟ್ಟ ಅಧಿಕಾರಿಗಳು, ಬಾಕಿ ಉಳಿದ ಕೈಗಾರಿಕೆಗಳ ಪ್ರಾರಂಭಕ್ಕೆ ಕೈಗಾರಿಕಾ ವಲಯದ ಪರಿಣಿತರೊಂದಿಗೆ, ಅಂತಾರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳ ಜತೆ ಸರ್ಕಾರ ಸಮಾಲೋಚನೆ ನಡೆಸುತ್ತಿದೆ ಎಂದು ತಿಳಿಸಿದರು.
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕೈಗಾರಿಕೋದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದೆ. ಇದರಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆ ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಇದನ್ನೂ ಓದಿಕರೊನಾದಿಂದ ತತ್ತರಿಸಿಹೋಗಿವೆ ಭಯೋತ್ಪಾದಕ ಶಿಬಿರಗಳು
22 ಘಟಕಗಳಿಂದ ಪಿಪಿಇ ಕಿಟ್: ಪ್ರಧಾನಿ ಮೋದಿ ಕರೆಯಂತೆ ಕರೊನಾ ಸಂಕಷ್ಟದ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮಹತ್ತರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊರ ದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್​ಗಳನ್ನು ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಈಗ ಪಿಪಿಇ ಕಿಟ್​ಗಳನ್ನು ಉತ್ಪಾದಿಸುತ್ತಿವೆ. 4 ಸಂಸ್ಥೆಗಳು ವೆಂಟಿಲೇಟರುಗಳ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್ ಕೊರತೆ ನೀಗಿಸಲು 40 ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಅಸಂಘಟಿತ ಕಾರ್ವಿುಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ವಿುಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ವಿುಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಕಾರ್ವಿುಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಚೀನಾ ಸೆಳೆಯಲು ಯೋಜನೆ
ಚೈನಾ ಕೈಗಾರಿಕೋದ್ಯಮಿಗಳು ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ಟಾಸ್ಕ್ ಫೋರ್ಸ್​ನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ನಡೆಸುವಂತೆ ಬಿಎಸ್​ವೈ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿಶೇಷ ಪೋ›ತ್ಸಾಹಕ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಜುಬಿಲಿಯಂಟ್​ಗೆ ಅನುಮತಿ
ರಾಜ್ಯದಲ್ಲಿ ಎಲ್ಲ ಔದ್ಯೋಗಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕೋವಿಡ್-19 ನಿಂದಾಗಿ ಮುಚ್ಚಲಾಗಿದ್ದ ಜುಬಿಲಿಯಂಟ್ ಕಾರ್ಖಾನೆಯನ್ನು ಸಹ ತೆರೆಯಲು ಅನುಮತಿ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಕಟ್ಟಡ ನಿರ್ಮಾಣ ಕಾರ್ವಿುಕರ ಕಲ್ಯಾಣ ಮಂಡಳಿ ವತಿಯಿಂದ ಈವರೆಗೆ 12.40 ಲಕ್ಷ ಕಟ್ಟಡ ನಿರ್ಮಾಣ ಕಾರ್ವಿುಕರಿಗೆ 5 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಂಚಿಯಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಕೆ ಆರಂಭಿಸಿದ ಸ್ವಿಗ್ಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
