ಬೆಂಗಳೂರು: ಎಲ್ಲರಿಗೂ ಸಮಾನವಾಗಿರುವ ಕಾನೂನು ಪಾಲಿಸದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಈ ದೇಶದ ಕಾನೂನು ತಪ್ಪನ್ನು ತಿದ್ದಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ತಿಳಿಸಿದರು.
ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಿದ್ದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ, ಮುಖ್ಯಮಂತ್ರಿಗಳ ಪದಕ ಪ್ರದಾನ ಹಾಗೂ ಸನ್ನಡತೆ ಶಿಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರಾಗೃಹ ಶಿಕ್ಷೆ ಕೈದಿಗಳನ್ನು ಮಾನಸಿಕವಾಗಿ ಬದಲಾಯಿಸಿ, ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಮತ್ತೊಂದು ಅವಕಾಶ ನೀಡುತ್ತದೆ. ತಪ್ಪನ್ನು ತಿದ್ದಿಕೊಂಡರೆ ಸನ್ನಡತೆ ಆಧಾರದಲ್ಲಿ ಬಿಡುಗಡೆಯಾಗಲು ಅವಕಾಶವಿದೆ ಎಂದು ಪ್ರತಿಪಾದಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸೊಲ್ಯೂಷನ್​ ಜ್ಯಾಮರ್​ಗಳನ್ನು ಅಳವಡಿಸಿದ್ದರಿಂದ ನೆರೆಹೊರೆ ನಿವಾಸಿಗಳಿಗೆ ಎದುರಾಗಿದ್ದ ನೆಟ್​ವರ್ಕ್​ ಸಮಸ್ಯೆಯನ್ನು ನಿವಾರಿಸಲಾಗಿದೆ. ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕೂ ಅಧಿಕ ಕೈದಿಗಳಿದ್ದಾರೆ. ಎಲ್ಲರಿಗೂ ಕೌಶಲ ತರಬೇತಿ ಹಾಗೂ ಶಿಕ್ಷಣ ನೀಡಿ ಪರಿವರ್ತನೆ ತರುವ ಜವಾಬ್ದಾರಿ ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಕೌಶಲ್ಯ ತರಬೇತಿ ನೀಡಿ ಕೈದಿಗಳಿಗೆ ಮನ@ಪರಿವರ್ತನೆ ಹೊಂದಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಡಾ. ಪರಮೇಶ್ವರ್​ ವಿವರಿಸಿದರು.
ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕಿ ಮಾಲಿನಿ ಕೃಷ್ಣಮೂರ್ತಿ ಮಾತನಾಡಿ, ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಧಾರವಾಡ ಕೇಂದ್ರ ಕಾರಾಗೃಹದಿಂದ ಸನ್ನಡತೆ ಆಧಾರದಲ್ಲಿ 77 ಕೈದಿಗಳು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಂಡಿದ್ದಾರೆ. ಇದೀಗ ಸವೋರ್ಚ್ಛ ನ್ಯಾಯಾಲಯದ ಆದೇಶದಂತೆ ವರ್ಷಕ್ಕೆ 3 ಬಾರಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಮುಂದಿನ ಹಂತದಲ್ಲಿ 73 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್​ ಮಹಾ ನಿರೀಕ ಆನಂದ್​ ರೆಡ್ಡಿ, ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್​, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 3 =
Remember me
