ಬೆಂಗಳೂರು: 7ನೇ ವೇತನ ಆಯೋಗದ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದ್ದು, ವೇತನ ಪರಿಷ್ಕರಣೆಗಾಗಿ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ನಿರಾಸೆ ಮೂಡಿಸಿದೆ.
ಸಾಕಷ್ಟು ಸಮಯದಿಂದ ಸಂಬಳ ಹೆಚ್ಚಾಗುತ್ತದೆ ಎಂದು ಲಕ್ಷಾಂತರ ನೌಕರರು ಕಾಯುತ್ತಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಆರು ತಿಂಗಳು ಆಯೋಗದ ಅವಧಿ ವಿಸ್ತರಿಸಲಾಗಿತ್ತು. ಈಗ ಮತ್ತೆ 4 ತಿಂಗಳು ಅವಧಿ ವಿಸ್ತರಣೆ ಮಾಡಿರುವುದು ನೌಕರರಿಗೆ ವೇತನ ಪರಿಷ್ಕರಣೆ ಕನ್ನಡಿಯೊಳಗಿನ ಗಂಟು ಎಂಬಂತಾಗಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿತ್ತು. ಈ ಆಯೋಗದ ಅವಧಿ ನವೆಂಬರ್ 18ಕ್ಕೆ ಅಂತ್ಯಗೊಳ್ಳಲಿದೆ. ಈ ಆಯೋಗವು ನವೆಂಬರ್‌ನಲ್ಲೇ ವರದಿಯನ್ನು ನೀಡುವ ಅಂದಾಜು ಮಾಡಲಾಗಿತ್ತು.ಆದರೆ ಈಗ ಆಯೋಗದ ಅವಧಿಯನ್ನು ಮಾರ್ಚ್ 15,2024ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳು 7ನೇ ವೇತನ ಆಯೋಗದ ಅವಧಿ ವಿಸ್ತರಿಸಿರುವ ಆದೇಶವನ್ನು ಹಿಂಪಡೆದು ನಿಗದಿತ ಅವಧಿಯಲ್ಲೇ ವರದಿ ಸ್ವೀಕರಿಸಿ, ಅನುಷ್ಠಾನಗೊಳಿಸುವ ವಿಶ್ವಾಸವಿದೆ. ಇಲ್ಲದೇ ಹೋದರೆ ನೌಕರರ ಅಭಿಪ್ರಾಯಪಡೆದು ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 6 =
Remember me
