ಬೆಂಗಳೂರು:ಸರ್ಕಾರಿ ಕಾಲೇಜು ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ 8.92 ಲಕ್ಷ ರೂಪಾಯಿಯನ್ನು ಬೇರೊಂದು ಆನ್‌ಲೈನ್‌ನಲ್ಲಿ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ನಡೆದಿದೆ.
ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಈ ಪ್ರಕರಣ ನಡೆದಿದೆ. ಈ ಕುರಿತು ಕಾಲೇಜಿನ ಪ್ರಾಂಶುಪಾಲ ಡಾ.ವೈ. ವೆಂಕಟೇಶಪ್ಪ ಅವರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಆರ್​ಪಿಸಿ ಬಡಾವಣೆಯಲ್ಲಿರುವ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾತೆ ತೆರೆಯಲಾಗಿದೆ. ಕಾಲೇಜು ಹಿರಿಯ ಅಧಿಕಾರಿಗಳ ಗಮನಕ್ಕೆ ಬಾರದೆ ಮೇ 12ರಿಂದ 30ರ ನಡುವೆ ಹಂತ ಹಂತವಾಗಿ 8.92 ಲಕ್ಷ ರೂಪಾಯಿಯನ್ನು ಅನಧಿಕೃತವಾಗಿ ಬೇರೊಂದು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇಲ್ಲ; ಹರಿದಾಡುತ್ತಿರುವುದು ನಕಲಿ ಆದೇಶ!
ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಜ್ಯೋತಿಷಿ ಮೇಲೇ ಹಲ್ಲೆ ನಡೆಸಿ ದರೋಡೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twelve =
Remember me
