ಕೊಪ್ಪಳ:ರಾಜಧಾನಿ ಮಾತ್ರವಲ್ಲದೆ ರಾಜ್ಯದ ಕೆಲವೆಡೆ ಕೂಡ ಬೀದಿನಾಯಿಗಳ ಹಾವಳಿ ಅತಿಯಾಗಿದ್ದು, ಮಕ್ಕಳು ಅವುಗಳ ದಾಳಿಗೆ ಗುರಿಯಾಗುತ್ತಿದ್ದಾರೆ. ಎಂಟು ವರ್ಷದ ಬಾಲಕಿಯೊಬ್ಬಳ ಮೇಲೆ ಬೀದಿನಾಯಿಗಳ ಹಿಂಡು ದಾಳಿ ನಡೆಸಿದ್ದಲ್ಲದೆ, ಆಕೆಯನ್ನು ಎಳೆದಾಡಿದ್ದೂ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಉಪ್ಪಾರ ಓಣಿಯಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷದ ಖುಷಿ ಎಂಬಾಕೆ ಬೀದಿನಾಯಿಗಳ ಹಿಂಡಿನ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈಕೆಯ ಮೇಲೆ ಏಕಕಾಲಕ್ಕೆ ನಾಲ್ಕೈದು ಬೀದಿನಾಯಿಗಳು ದಾಳಿ ಮಾಡಿವೆ.
ಇದನ್ನೂ ಓದಿ:ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು
ಬೀದಿನಾಯಿಗಳು ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಾಲಕಿಯ ಪ್ರಾಣ ಉಳಿದಿದ್ದೇ ಹೆಚ್ಚು ಎಂಬುದು ಕಂಡುಬಂದಿದೆ. ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಿಸಿದ್ದಾರೆ.
ಇದನ್ನೂ ಓದಿ:ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಗಂಗಾವತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಗರಸಭೆ ಗಮನಕ್ಕೆ ತಂದರೂ ಅವರು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!

‘ತಂಗಿಗೆ ಮೆಸೇಜ್ ಮಾಡ್ಬೇಡ’ ಎಂದು ಬುದ್ಧಿಮಾತು ಹೇಳಿದ ಅಣ್ಣನ ಕೊಂದೇಬಿಟ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
