ಧಾರವಾಡ:ಮುಂಗಾರು ಮಳೆಯ ಆರ್ಭಟಕ್ಕೆ ಸಿಕ್ಕ 8 ವರ್ಷದ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ.
ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ತಂದೆ ಜತೆಗೆ ಹೊಲಕ್ಕೆ ಹೋಗಿದ್ದ ಬಾಲಕಿ ಶ್ರೀದೇವಿ ನಿಂಗಪ್ಪ ಗಾಣಿಗೇರ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
ಇದನ್ನೂ ಓದಿರಿಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್​!
ಶ್ರೀದೇವಿ ನಿಂಗಪ್ಪ ಗಾಣಿಗೇರ ಗುರುವಾರ ತಂದೆಯೊಂದಿಗೆ ಹೊಲಕ್ಕೆ ಹೋಗಿ ಮನೆಗೆ ವಾಪಸ್​ ಬರುತ್ತಿದ್ದಳು. ಈ ವೇಳೆ ಅವಘಡ ಸಂಭವಿಸಿದ್ದು, ಬಾಲಕಿ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ.
ಸ್ಥಳಕ್ಕೆ ಕಲಘಟಗಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ತಗ್ಗುಪ್ರದೇಶದ ಮನೆಗಳಿಗೂ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ: 2 ಮನೆ ಮಣ್ಣುಪಾಲು, ಐವರು ನಾಪತ್ತೆ, 20 ಹಸುಗಳ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
