ಬೆಂಗಳೂರು:ಪ್ರಸಕ್ತ ಮುಂಗಾರಿನ ಅವಧಿಯಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಮಳೆಯ ಕಾರಣಕ್ಕೆ ಹಲವೆಡೆ ಒಟ್ಟಾರೆ 80,000 ಹೆಕ್ಟೇರ್ ಬೆಳೆ ನಾಶವಾಗಿದ್ದು, ಈ ವಾರದೊಳಗಾಗಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಕಾಸ ಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪಸಕ್ತ ಸಾಲಿನ ಮಳೆ ಪ್ರಮಾಣದ ವಿವರ, ಮಳೆಹಾನಿ ಹಾಗೂ ಇಲಾಖೆ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಅವರು, “ಉತ್ತರ ಒಳನಾಡಿನಲ್ಲಿ ವಾಡಿಕೆ ಪ್ರಕಾರ 260 ಮಿ.ಮೀ ಮಳೆಯಾಗಬೇಕು ಆದರೆ, ಪ್ರಸ್ತುತ 322 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.೨೪ ರಷ್ಟು ಹೆಚ್ಚು ಮಳೆಯಾಗಿದೆ.
ಮಲೆನಾಡು ಭಾಗದಲ್ಲಿ 1127 ಮಿ.ಮೀ ವಾಡಿಕೆ ಮಳೆ ಪ್ರಮಾಣವಾಗಿದ್ದು, ಪ್ರಸ್ತುತ 1361 ಮಿ.ಮೀ ಅಂದರೆ ಶೇ.21ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವಾಡಿಕೆಯ ಮಳೆ 2299 ಮಿ.ಮೀ ಆಗಿದ್ದು, ಪ್ರಸ್ತುತ 2947 ಮಿ.ಮೀ ಅಂದರೆ ಶೇ.೨೮ ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ಸರಾಸರಿ ಮಳೆಯ ಪ್ರಮಾಣ 553 ಮಿ.ಮೀ ಆಗಿದ್ದು, ಪ್ರಸ್ತುತ 699 ಮಿ.ಮೀ ಮಳೆಯಾಗಿದ್ದು, ಈ ಪ್ರಮಾಣ ಶೇ.26ರಷ್ಟು ಹೆಚ್ಚು. ವಿಶೇಷವೆಂದರೆ ಈ ವರ್ಷ ಯಾವ ಜಿಲ್ಲೆಯಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿಲ್ಲ ಎಂದರು.
ಪ್ರಸ್ತುತ ಮಳೆಗಾಲದಲ್ಲಿ ಉಂಟಾಗಿರುವ ಜೀವಹಾನಿಯ ಬಗ್ಗೆಯೂ ಮಾಹಿತಿ ನೀಡಿದ ಸಚಿವರು, “ಈ ವರ್ಷ ಪ್ರಾಣಹಾನಿಯ ಸಂಖ್ಯೆಯನ್ನೂ ನಿಯಂತ್ರಿಸಲಾಗಿದೆ ಎಂದು ಹೇಳಿದರು.
2019ರಲ್ಲಿ ಇದೇ ದಿನಕ್ಕೆ 67 ಜನ ಮೃತಪಟ್ಟಿದ್ದರು. 2022ರ ಮಳೆಗಾಲದಲ್ಲಿ 75 ಜನ ಮೃತಪಟ್ಟಿದ್ದರು. ಆದರೆ, ಈ ವರ್ಷ 58 ಜನ ಮೃತಪಟ್ಟಿದ್ದು, ಸರ್ಕಾರದ ಮುಂಜಾಗ್ರತಾ ಕ್ರಮಗಳಿಂದಾಗಿ ಸಾವಿನ ಸಂಖ್ಯೆಯನ್ನು ಇಳಿಸಲಾಗಿದೆ. ಆದರೂ, ಯಾವುದೇ ಜೀವಕ್ಕೂ ಒಂದು ಮೌಲ್ಯವಿದೆ. ಪ್ರತಿಯೊಬ್ಬರ ಜೀವವನ್ನು ಕಾಯುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.
ಮಳೆಯ ಕಾರಣಕ್ಕೆ  ರಾಜ್ಯಾದ್ಯಂತ 80,000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು.
ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ವರ್ಷ ಬೆಳೆಹಾನಿ ಪ್ರಮಾಣವನ್ನು ನಿಯಂತ್ರಿಸಲಾಗಿದೆ. 2020ರಲ್ಲಿ 2.21ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿತ್ತು. 2021ರಲ್ಲಿ 2.12 ಲಕ್ಷ ಹೆಕ್ಟೇರ್ ಹಾಗೂ 2022 ರಲ್ಲಿ 1.53 ಹೆಕ್ಟೇರ್‌ ಬೆಳೆಹಾನಿಯಾಗಿತ್ತು. ಆದರೆ, ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ 80,000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಇನ್ನೂ ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನು ನಿರ್ವಹಣೆ ಮಾಡಲಾಗುವುದು ಎಂದರು.
ಪ್ರಸಕ್ತ ಸಾಲಿನ ಮಳೆಗಾಲದಲ್ಲಿ 1126 ಮನೆಗಳು ಸಂಪೂರ್ಣ ಕುಸಿದಿದ್ದರೆ, ಅನಧೀಕೃತವಾಗಿ ನಿರ್ಮಿಸಲಾಗಿರುವ 75 ಮನೆಗಳೂ ಕುಸಿದಿವೆ. ಇದಲ್ಲದೆ, 1176 ಮನೆಗಳು ತೀವ್ರ ಹಾನಿಗೆ ಒಳಗಾಗಿದ್ದರೆ, 2338 ಮನೆಗಳು ಭಾಗಶಃ ಹಾನಿಯಾಗಿವೆ. ಒಟ್ಟಾರೆ 8,000 ಮನೆಗಳು ಹಾನಿಗೆ ಒಳಗಾಗಿವೆ. ಅನಧೀಕೃತ ಮನೆಗಳ ಬಗ್ಗೆಯೂ ನಮ್ಮ ಸರ್ಕಾರ ಸಾಕಷ್ಟು ಉದಾರವಾಗಿಯೇ ನಡೆದುಕೊಳ್ಳುತ್ತಿದ್ದು, ಮನೆಹಾನಿಯಾದ ಎಲ್ಲರಿಗೂ ಈಗಾಗಲೇ ಪರಿಹಾರ ಒದಗಿಸಲಾಗಿದೆ ಎಂದರು.
ಮನೆ ಸಂಪೂರ್ಣ ಹಾನಿಯಾದರೆ 1,20,000 ರೂ ಜತೆಗೆ ಸರ್ಕಾರದಿಂದಲೇ ಒಂದು ಮನೆಯನ್ನೂ ನೀಡಲಾಗುತ್ತಿದೆ. ಈ ಕಾರ್ಯಗಳಿಗೆ ಈವರೆಗೆ ಒಟ್ಟು 9.21 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಮನೆಗೆ ನೀರು ನುಗ್ಗಿ ಸಣ್ಣಪುಟ್ಟ ಹಾನಿಯಾಗಿದ್ದರೆ ಅದನ್ನು ಸುಧಾರಿಸಲು 2800 ಮನೆಗಳಿಗೆ 70 ಲಕ್ಷ ಹಣ ಪರಿಹಾರ ನೀಡಲಾಗಿದೆ.
ದಿನಬಳಕೆ ವಸ್ತುಗಳಿಗೂ 70 ಲಕ್ಷ ಪರಿಹಾರ ಸೇರಿ ಒಟ್ಟಾರೆ 1.40 ಕೋಟಿ ರೂ ಪರಿಹಾರ ನೀಡಲಾಗಿದೆ. ಅನದೀಕೃತ ಮನೆಗಳಿಗೆ ಹಾನಿಯಾಗಿದ್ದರೆ ಅವರಿಗೂ 1 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗಿದೆ. ಮನೆ ಭಾಗಶಃ ಹಾನಿಯಾಗಿದ್ದರೆ ಎಸ್‌ಡಿಆರ್‌ಎಫ್‌ ನಿಯಮದ ಅಡಿಯಲ್ಲಿ ಕೇವಲ 2,500 ರೂಪಾಯಿ ಮಾತ್ರ ಪರಿಹಾರ ನೀಡಲು ಸಾಧ್ಯ. ಆದರೆ, ರಾಜ್ಯ ಸರ್ಕಾರದ ವತಿಯಿಂದ 50,000 ವರೆಗೆ ಪರಿಹಾರ ನೀಡಲಾಗಿದೆ.
ಇನ್ನೂ ಹಸು-ದನ ಸೇರಿದಂತೆ 151ದೊಡ್ಡ ಜಾನುವಾರುಗಳು ಹಾಗೂ 137 ಚಿಕ್ಕ ಜಾನುವಾರುಗಳು ಮೃತಪಟ್ಟಿವೆ. ಇದಕ್ಕೂ ಸಹ 52.98 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 667 ಕೋಟಿ ರೂಪಾಯಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲೂ ಸಹ ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eleven =
Remember me
