ವಿಜಯಪುರ:ನಗರದ BLDE ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ (IGNOU) ನಡೆಸಿದ ಎಂ.ಎ., ಇಂಗ್ಲಿಷ್ ಅಂತಿಮ ವರ್ಷದ ಪರೀಕ್ಷೆಯಲ್ಲಿ 81 ವರ್ಷ ವಯಸ್ಸಿನ ನಿಂಗಯ್ಯ ಒಡೆಯರ್ ಎಂಬುವವರು ಶುಕ್ರವಾರ ಪರೀಕ್ಷೆ ಬರೆಯುವ ಮೂಲಕ ಕಲಿಕೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಇಳಕಲ್​​ ತಾಲೂಕಿನ ಗುಡೂರು ಬಳಿಯ ಎಸ್.ಸಿ. ಹಳ್ಳಿ ನಿವಾಸಿ ನಿಂಗಯ್ಯ ಒಡೆಯರ್​ ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ಕಲಿಯಬೇಕೆಂಬ ಹಂಬಲದಿಂದ ಕನ್ನಡ, ಹಿಂದಿ, ಇಂಗ್ಲಿಷ್ ವಿಷಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇಗ್ನೌದಿಂದ ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದು, ಈಗ ಮತ್ತದೇ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಐದನೇ ಸ್ನಾತಕೋತ್ತರ ಪದವಿಗೆ ಪರೀಕ್ಷೆ ಎದುರಿಸಿದ್ದಾರೆ.
ಇದನ್ನೂ ಓದಿ:ರಾಜೀವಗಾಂಧಿ ಆರೋಗ್ಯ ವಿವಿ 25ನೇ ಘಟಿಕೋತ್ಸವ; ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್​ ಪ್ರದಾನ
ನಿಂಗಯ್ಯನವರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದು, ಐವರು ಮೊಮ್ಮಕ್ಕಳಿದ್ದಾರೆ. ಪುತ್ರಿ ಕೂಡ ಪಿಎಚ್‌ಡಿ ಪದವಿ ಪಡೆದಿದ್ದು, ಇವರ ಪುತ್ರರು ಖಾಸಗಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಯೋಗಪಟುವೂ ಆಗಿರುವ ನಿಂಗಯ್ಯ ಒಡೆಯರ್ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವುದು ವಿಶೇಷ.
ಹಾಲಿ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಂಗಯ್ಯನವರು ಆಕರ್ಷಣೆ ಕೇಂದ್ರವಾಗಿದ್ದು, ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೌ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
