ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಬಂದ್ ಹಾಗೂ ಪ್ರತಿಭಟನೆಗಳಿಂದ ಅಂದಾಜು 82 ಕೋಟಿ ರೂ. ಸಾರ್ವಜನಿಕ ಆಸ್ತಿ ನಷ್ಟವಾಗಿದೆ ಎಂದು ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.
ಕನಕಪುರ ತಾಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಆಕ್ಷೇಪಣೆ ಸಲ್ಲಿಸಿ, ಕನಕಪುರ, ಸಾತನೂತು,. ಕೋಡಿಹಳ್ಳಿ ಸೇರಿ ರಾಜ್ಯದ ವಿವಿಧ ಠಾಣೆಗಳಲ್ಲಿ ಒಟ್ಟು 29 ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದ್ದು, 40 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ಕೊಡುಂಗಲ್ಲೂರು ಬಂದ್ ಹಾಗೂ ಪ್ರತಿಭಟನೆ ವೇಳೆ ಉಂಟಾಗುವ ನಷ್ಟದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಹೊಣೆಗಾರಿಕೆ ನಿಗದಿಪಡಿಸಲು ಹೈಕೋರ್ಟ್ ನ್ಯಾಯಮೂರ್ತಿ ಗಳು ಸಮಾಲೋಚನೆ ನಡೆಸಿ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಆಕ್ಷೇಪಣೆಗಳನ್ನು ದಾಖಲಿಸಿ ಕೊಂಡ ನ್ಯಾಯಪೀಠ, ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
