ಬೆಂಗಳೂರು:ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತರಿಸಿಕೊಂಡು‌ ಬೆಂಗಳೂರು ನಗರದ ವಿವಿಧೆಡೆ ಮಾರಾಟ‌ ಮಾಡುತ್ತಿದ್ದ ಇಬ್ಬರು ದುಷ್ಕರ್ಮಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 84.60 ಲಕ್ಷ ರೂ. ಮೌಲ್ಯದ 141 ಕೆ.ಜಿ. ಗಾಂಜಾ, ತೂಕದ ಯಂತ್ರ ಮತ್ತು ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.
ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22) ಹಾಗೂ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಮೂರ್ತಿ (40) ಬಂಧಿತರು. ಕೋರಮಂಗಲದ ಬಳ್ಳಾರಿ ಕಾಲೊನಿ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ಮುಂದಾಗಿದ್ದರು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ಇದನ್ನೂ ಓದಿ:ಸಾರಿಗೆ ನೌಕರರಿಂದ ನಟ ಯಶ್‌ಗೆ ಬಂತಂತೆ ಈ ಪತ್ರ: ನಿಜನಾ? ಸುಳ್ಳಾ…? ನೂರೆಂಟು ಪ್ರಶ್ನೆ…!
ಆರೋಪಿಗಳು ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಅರಕು ಗುಡ್ಡಗಾಡು ಪ್ರದೇಶದ ಆದಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದರು. ಇದನ್ನು ನಗರಕ್ಕೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
VIDEO | ಬೆಟ್ಟದ ಮೇಲೆ ಓಡಿದ ಸಚಿವರು ! ‘ಹೊಸ ಭಾರತ ಫಿಟ್ ಭಾರತ’

ಕಡಿಮೆ ಅವಧಿಯ ವಿಮಾನ ಯಾನದಲ್ಲಿ ಉಪಾಹಾರ ಸೌಲಭ್ಯ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
