ಬೆಂಗಳೂರು:ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ (ಐಬಿಸಿ) ಮತ್ತು ರಾಜ್ಯ ಸರಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಸಹಿ ಹಾಕಲಾಗಿದೆ.
ಈ ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದ್ಧಾರೆ.
ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ ಮರುಬಳಕೆಗೆ ಬರುವಂಥ ಲಿಥಿಯಾನ್‌ ಬ್ಯಾಟರಿಗಳ ಉತ್ಪಾದನೆಯನ್ನು ಈ ಕಂಪನಿಯು ಇನ್ನು ಒಂದು ವರ್ಷದಲ್ಲಿ ರಾಜ್ಯದಲ್ಲಿ ಪ್ರಾರಂಭಿಸಲಿದೆ. ಈ ಉದ್ದೇಶಕ್ಕಾಗಿ ಕಂಪನಿಯ ಕೋರಿಕೆಯಂತೆ ಬೆಂಗಳೂರು ಗ್ರಾಮಾಂತರ ವಲಯದಲ್ಲಿ 100 ಎಕರೆ ಜಮೀನನ್ನು ಕೊಡಲಿದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಂಪನಿಯೊಂದಿಗೆ ಮೂರು ಸುತ್ತು ಮಾತುಕತೆ ನಡೆಸಿ, ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಮನದಟ್ಟು ಮಾಡಿಕೊಡಲಾಗಿತ್ತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಾಲೋ ಬ್ಲಾಕ್​ ತುಂಬಿದ್ದ ಕ್ಯಾಂಟರ್​ ಮುಗುಚಿ ಇಬ್ಬರ ಮೃತ್ಯು
ಈ ಕಂಪನಿಯು ಇಂತಹ ಬ್ಯಾಟರಿಗಳನ್ನು ದಕ್ಷಿಣ ಕೊರಿಯಾದಲ್ಲಿ ಪರೀಕ್ಷಾರ್ಥವಾಗಿ ತಯಾರಿಸುವ ಘಟಕವನ್ನು ಹೊಂದಿದ್ದು, ಅದು ಕೂಡ ಸದ್ಯದಲ್ಲೇ ಕಾರ್‍ಯಾರಂಭ ಮಾಡಲಿದೆ. ಅತ್ಯುತ್ತಮ ಬ್ಯಾಟರಿಗಳ ಉತ್ಪಾದನೆಗೆ ಡ್ರೈರೂಮ್‌ ಮತ್ತು ಕ್ಲೀನ್‌ ರೂಮ್‌ಗಳನ್ನು ಕಂಪನಿ ಸ್ಥಾಪಿಸಲಿದೆ. ಇದು ರಾಜ್ಯದಲ್ಲಿ ಇಂತಹ ಎರಡನೇ ಘಟಕವಾಗಿದ್ದು, ಈ ಕ್ಷೇತ್ರದಲ್ಲಿ ರಾಜ್ಯವು ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ ಎಂದು ಸಚಿವ ಎಂ.ಬಿ. ಪಾಟೀಲ ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ, ಐಬಿಸಿ ಸಂಸ್ಥಾಪಕ ಮತ್ತು ಸಿಇಒ ಡಾ.ಪ್ರಿಯದರ್ಶಿ ಪಾಂಡಾ, ಕಂಪನಿಯ ಸಿಒಒ ಶಶಿ ಕುಪ್ಪಣ್ಣಗಾರಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 3 =
Remember me
