ಮಂಗಳೂರು:ಕೊಡಗಿನಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಸುರತ್ಕಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದು, ಆತಂಕ ಹೆಚ್ಚಿಸಿದೆ.
ಸುರತ್ಕಲ್​ನ ಕೃಷ್ಣಾಪುರ 7ನೇ ಬ್ಲಾಕ್​ ನಿವಾಸಿ ಅಬ್ದುಲ್​ ರೆಹಮಾನ್​ ಎಂಬುವರ ಪುತ್ರ ಮೊಹಮದ್​ ಹಸೀನ್​(14) ಮೃತ ದುರ್ದೈವಿ. ಈತ 8ನೇ ತರಗತಿ ಓದುತ್ತಿದ್ದ. ಎಂದಿನಂತೆ ಸೋಮವಾರ(ಜ.9) ಬೆಳಗ್ಗೆ ಶಾಲೆಗೆ ಹೊರಡಲೆಂದು ಸಿದ್ಧವಾಗಿದ್ದ. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಎದೆನೋವಿನಿಂದ ಕುಸಿದು ಬಿದ್ದ ಹಸೀನ್​ನನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಬದುಕಲಿಲ್ಲ.
ಎರಡು ದಿನಗಳ ಹಿಂದಷ್ಟೇ ಅಂದರೆ ಜ.7ರ ರಾತ್ರಿ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಕೂಡುಮಂಗಳೂರಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಕೂಡುಮಂಗಳೂರು ಗ್ರಾಮದ 12 ವರ್ಷದ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟಿದ್ದ. ಈತ ಕೊಪ್ಪದ ಭಾರತಮಾತ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯಾಗಿದ್ದ.
ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದ್ದು, ಈ ಮಕ್ಕಳ ಸಾವು ಮತ್ತಷ್ಟು ಆತಂಕ ಸೃಷ್ಟಿಸಿದೆ. ಕರೊನಾ ಬಳಿಕ ಚಿಕ್ಕ ಮಕ್ಕಳು, ಯುವ ಜನತೆಯಲ್ಲೂ ಹೃದಯಾಘಾತ ಕಾಣಿಸಿಕೊಳ್ಳುತ್ತಿದ್ದು, ನಿತ್ಯ ಹತ್ತಾರು ಸಾವಿನ ಸುದ್ದಿಗಳು ಕೇಳಿಬರುತ್ತಲೇ ಇವೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಲಕ್ಷ್ಮೀಪತ್​ ಸಿಂಘಾನಿಯಾ ಇನ್​ಸ್ಟಿಟ್ಯೂಟ್​ ಆಫ್​ ಕಾರ್ಡಿಯಾಲಜಿ ಮಾಹಿತಿ ಬಿಡುಗಡೆ ಮಾಡಿತ್ತು.
ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಸಾವು: ಕೊಡಗಿನಲ್ಲಿ ದುರ್ಘಟನೆ, ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವು! ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಸಾವು

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​ ಕುಸಿತ, ತಾಯಿ-ಮಗು ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
