ಬೆಂಗಳೂರು:ರಾಜ್ಯದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ 9 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುರಕ್ಷಿತ, ಸ್ಮಾರ್ಟ್ ಹಾಗೂ ಸುಸ್ಥಿರ ನಗರಗಳ ಅಭಿವೃದ್ಧಿಗೆ ಅಗತ್ಯವಾದ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಮುನಿಸಿಪಾಲಿಕಾ-2023’ ಅಂತಾರಾಷ್ಟ್ರೀಯ ಸಮ್ಮೇಳನ,ಪ್ರದರ್ಶನವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ನಗರದಲ್ಲಿ ವಾಸಿಸುತ್ತಿರುವ ಜನರಿಗೆ ಸುಗಮ ಸಂಚಾರ, ಕಸ ವಿಲೇವಾರಿ,ಒಳಚರಂಡಿ ವ್ಯವಸ್ಥೆ ಸೇರಿ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಅದರಂತೆ, ಹಳ್ಳಿಗಾಡಿನ ಜನರಿಗೂ ನಾಗರಿಕ ಸೌಲಭ್ಯಗಳಿಗೆ ಒದಗಿಸುವುದು ಅವಶ್ಯಕ. ಈ ದಿಕ್ಕಿನಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮೋಖವಾಗಿದೆ. 289 ಪಟ್ಟಣಗಳಿಗೆ ಕುಡಿಯುವ ನೀರು ಸೌಲಭ್ಯಕ್ಕಾಗಿ ಅಂದಾಜು 9 ಸಾವಿರ ಕೋಟಿ ರೂ.ಅನುದಾನ ನೀಡಲು ನಿರ್ಧರಿಸಲಾಗಿದೆ. 53 ಪಟ್ಟಣಗಳಿಗೆ ಚರಂಡಿ ವ್ಯವಸ್ಥೆಗೆ 1,900 ಕೋಟಿ ರೂ ನೀಡಲಾಗುವುದು. ಈ ಮೂಲಕ ನಗರ ಪ್ರದೇಶಗಳು ಸುಂದರವಾಗಿರಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.
ರಾಜ್ಯದ 316 ನಗರಗಳಿಗೆ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ. ನಗರ ಜೀವನಮಟ್ಟವನ್ನು ಇನ್ನಷ್ಟು ಸುಗಮಗೊಳಿಸಲು ಎಲ್ಲ ವಲಯಗಳಿಗೂ ಅನುದಾನ ಒದಗಿಸಲಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ,ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು. ಜತೆಗೆ, ಗ್ರಾಮೀಣ ಪ್ರದೇಶಗಳು ಬೆಳೆಯುವಂತಾಗಬೇಕು. ಭಾರತದ ಹಳ್ಳಿಗಳ ದೇಶ. ಹಿಂದೆ ಶೇ.80 ಮಂದಿ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಈಗ ಹಳ್ಳಿಗಳಲ್ಲಿ ವಾಸಿಸುತ್ತಿರುವ ಜನಸಂಖ್ಯೆ ಶೇ.60ಗಿಂತ ಕಡಿಮೆಗೆ ಇಳಿದಿದೆ. ಶೇ.38 ಮಂದಿ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಕರ್ನಾಟಕದ ಒಟ್ಟು ಎಳು ಕೋಟಿ ಜನಸಂಖ್ಯೆ ಪೈಕಿ 3 ಕೋಟಿ ಮಂದಿ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆಗಳು, ಒಳಚರಂಡಿ, ಕುಡಿಯುವ ನೀರು, ಕಸ ವಿಲೇವಾರಿ, ದಟ್ಟಣೆ ನಿವಾರಣೆ ಸೇರಿ ಮೂಲಸೌಕರ್ಯ ಕಲ್ಪಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಸಿಎಂ ಮಾಹಿತಿ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಭೈರತಿ ಸುರೇಶ್, ರಹೀಮ್ ಖಾನ್, ಶಾಸಕ ತಮ್ಮಯ್ಯ, ಎಂಎಲ್ಸಿ ಎಸ್.ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘರ್. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್ ಮತ್ತಿತರರಿದ್ದರು.
ಇದನ್ನೂ ಓದಿ:ಅನುದಾನ ಲೂಟಿಗೆ ಸಚಿವರ ಆತ್ಮೀಯರೇ ಏಜೆಂಟರು; ಮಾಜಿ ಸಿಎಂ ಸದಾನಂದಗೌಡ ಆರೋಪ
ಕರ್ನಾಟಕ ಮೊದಲ ಸ್ಥಾನ:ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಇದೆ. ರಾಜಧಾನಿಯಲ್ಲಿ ಹಂತ ಹಂತದಲ್ಲಿ ಮೆಟ್ರೋ ಮಾರ್ಗ ಪೂರ್ಣಗೊಂಡರೆ ಒಟ್ಟು 176 ಕಿ.ಮೀ. ಮಾರ್ಗದಲ್ಲಿ ರೈಲು ಓಡಾಡುವಂತಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ನಗರ ಬೆಂಗಳೂರು. ನಮ್ಮ ಸರ್ಕಾರ ಈಗಾಗಲೇ ಬ್ರ್ಯಾಂಡ್ ಬೆಂಗಳೂರು ಅಭಿಯಾನ ಆರಂಭಿಸಿದೆ. ದೇಶದಲ್ಲೇ ಬ್ರ್ಯಾಂಡ್ ಬೆಂಗಳೂರುನ್ನು ನಂಬರ್ ಒನ್ ಆಗಿ ಮಾಡಬೇಕಿದೆ. ತಂತ್ರಜ್ಞಾನ, ವಿಜ್ಞಾನ, ಐಟಿ-ಬಿಟಿ ಕ್ಷೇತ್ರದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
188 ಇಂದಿರಾ ಕ್ಯಾಂಟಿನ್ ಆರಂಭ:2016ರಲ್ಲಿ ನಾನು ಸಿಎಂ ಆಗಿದ್ದಾಗ ರಾಜ್ಯದಲ್ಲಿ ಇಂದಿರಾ ಕ್ಯಾಂಟಿನ್‌ಗಳನ್ನು ಆರಂಭಿಸಿದ್ದೆ. ಬೆಂಗಳೂರಿನಲ್ಲಿ 197 ಕ್ಯಾಂಟಿನ್ ತೆರೆಯಲಾಗಿತ್ತು. ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರಿಗೆ, ಮಧ್ಯಮ ವರ್ಗದವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಮಿಕರಿಗೆ, ಹೊರಗಿನಿಂದ ಆಸ್ಪತ್ರೆಗಳಿಗೆ ಬರುವವರಿಗೆ, ಅಟೋದವರಿಗೆ, ವಿದ್ಯಾರ್ಥಿಗಳಿಗೆ, ಕಾರು ಚಾಲಕರಿಗೆ ಅನುಕೂಲವಾಗಿದೆ. ಇಡೀ ದೇಶದಲ್ಲಿ ಕಡಿಮೆ ದರದಲ್ಲಿ ಆಹಾರ ಪದಾರ್ಥಗಳನ್ನು ಒದಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಿಎಂ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 10 =
Remember me
