
ಬೆಂಗಳೂರು: ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯೆಯ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸಿಗೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಸಿಎಂಗೆ ಜನ ಸ್ಪಂದನದಲ್ಲಿ ದೂರು ನೀಡಿದರು.
ಕೂಡಲೇ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಮಾತನಾಡಿದ ಮುಖ್ಯಮಂತ್ರಿಯವರು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.
ಇದೇ ವೇಳೆ 96 ವರ್ಷದ ಪರಂದಾಮಯ್ಯ ಜೀವನೋತ್ಸಾಹಕ್ಕೆ ಮುಖ್ಯಮಂತ್ರಿಯವರು ಮೆಚ್ಚುಗೆ ಸೂಚಿಸಿ ಇನ್ನಷ್ಟು ಕಾಲ ಹೀಗೇ ಆರೋಗ್ಯವಾಗಿ ಗಟ್ಟಿಯಾಗಿರಿ ಎಂದು ಶುಭ ಕೋರಿದರು.
ರಾಮನಗರ ಜಿಲ್ಲೆಯ ರಾಜಮ್ಮ ಎಂಬ ವೃದ್ಧೆ ತಮ್ಮ ಜಮೀನನ್ನು ಮೈದುನ ಒತ್ತುವರಿ ಮಾಡಿಕೊಂಡಿದ್ದು, ಬಾವಿಯನ್ನೂ ಮುಚ್ಚಿರುತ್ತಾರೆ. ತಮಗೆ ಗಂಡು ಮಕ್ಕಳಿಲ್ಲ; ಹೆಣ್ಣು ಮಕ್ಕಳು ಮದುವೆಯಾಗಿ, ಗಂಡನ ಮನೆಯಲ್ಲಿದ್ದಾರೆ. ಒಬ್ಬರೇ ಇರುವ ತನಗೆ ಜಮೀನು ಬಿಡಿಸಿಕೊಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.
ರಾಮನಗರ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಸಂಪರ್ಕಿಸಿದ ಸಿಎಂ  ಸ್ಥಳ ಪರಿಶೀಲಿಸಿ, ರಾಜಮ್ಮ ಅವರ ಜಮೀನು ಬಿಡಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − nine =
Remember me
