ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದೆ. ಅದರೊಂದಿಗೆ ಲಕ್ಷಣ ರಹಿತ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಒಟ್ಟಾರೆ ಸೋಂಕಿತರಲ್ಲಿ ಶೇ.97 ಮಂದಿಗೆ ರೋಗದ ಯಾವುದೇ ಲಕ್ಷಣಗಳೇ ಇಲ್ಲ…!
ರಾಜ್ಯ ಕೋವಿಡ್ ವಾರ್ ರೂಮ್ ವಿಶ್ಲೇಷಣೆ ಅನುಸಾರ ಇತ್ತೀಚೆಗೆ ವರದಿಯಾಗುತ್ತಿರುವ ಬಹುತೇಕ ಪ್ರಕರಣಗಳಲ್ಲಿ ರೋಗದ ಲಕ್ಷಣಗಳೇ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದ ಸಂದರ್ಭದಲ್ಲಿ ಶೇ.80 ಮಂದಿ ಲಕ್ಷಣ ರಹಿತರಾಗಿದ್ದರು. ಆ ಪ್ರಮಾಣವೀಗ ಶೇ.97ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಲಕ್ಷಣ ರಹಿತ ಪ್ರಕರಣಗಳು ಕೊಪ್ಪಳದಲ್ಲಿ ವರದಿಯಾಗಿದ್ದು, ಇಲ್ಲಿ ಶೇ 99.9 ಸೋಂಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಗೋಚಿರಿಸಿಲ್ಲ. ನಂತರದಲ್ಲಿ ಯಾದಗಿರಿ, ಬೀದರ್, ಕೊಡಗು, ಹಾವೇರಿ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ಶೇ. 98ಕ್ಕೂ ಮಂದಿಗೆ ಲಕ್ಷಣಗಳು ಕಂಡುಬಂದಿಲ್ಲ.   ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ರಾಮನಗರದಲ್ಲಿ ಅತಿ ಕಡಿಮೆ ಶೇ 86.3 ಲಕ್ಷಣ ರಹಿತ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ ಹೆಚ್ಚಿದ ಪರೀಕ್ಷೆ ಪ್ರಮಾಣ:ರಾಜ್ಯದಲ್ಲಿ ಪ್ರತಿ 10 ಲಕ್ಷ ಜನರಲ್ಲಿ ಸರಾಸರಿ 10,161 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಲ್ಲಿ ಹೆಚ್ಚಿನ ಪರೀಕ್ಷೆಗಳು ನಡೆಯುತ್ತಿದೆ. ಬೆಳಗಾವಿ, ಬೀದರ್ ಸೇರಿದಂತೆ 26 ಜಿಲ್ಲೆಗಳಲ್ಲಿ ಪರೀಕ್ಷೆ ಪ್ರಮಾಣ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ಪ್ರತಿ 10 ಲಕ್ಷ ಜನರಲ್ಲಿ 27,287 ಮಂದಿಗೆ ಪರೀಕ್ಷೆ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ 3,250 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಸೋಂಕು ಪ್ರಮಾಣ ದರ:ರಾಜ್ಯದಲ್ಲಿ ಸೋಂಕು ಪ್ರಮಾಣ ದರ ಶೇ. 12 ಇದ್ದು, ಪ್ರತಿ 100 ಪರೀಕ್ಷೆಗಳಲ್ಲಿ 12 ಮಂದಿಗೆ ಸೋಂಕು ದೃಢಪಡುತ್ತಿದೆ. ಓರಿಸ್ಸಾದಲ್ಲಿ ನೂರರಲ್ಲಿ 34 ಮಂದಿ ಸೋಂಕಿಗೆ ಒಳಗಾಗುತ್ತಿದ್ದರೆ, ತೆಲಂಗಾಣದಲ್ಲಿ ಕೇವಲ ಇಬ್ಬರಲ್ಲಿ ಸೋಂಕು ದೃಢಪಡುತ್ತಿದೆ.
ಕರೊನಾ ಬುಲೆಟಿನ್​: ಇಂದು ಹತ್ತು ಸಾವಿರಕ್ಕೂ ಅಧಿಕ ಸೋಂಕು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
