ತುಮಕೂರು:ಇಲ್ಲೊಬ್ಬಳು ಬಾಲಕಿ, ತನ್ನ ಕುಟುಂಬಸ್ಥರಿಗೆ ಜಾಗದ ಸಮಸ್ಯೆಯಿಂದ ಆಗುತ್ತಿರುವ ತೊಂದರೆಯ ಕುರಿತಾಗಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾಳೆ.
ತುಮಕೂರು ಜಿಲ್ಲೆ, ತುರುವೇಕೆರೆ ತಾಲೂಕಿನ ತೂಯಲಹಳ್ಳಿಯಲ್ಲಿನ 9ನೇ ತರಗತಿಯ ಲಕ್ಷ್ಮೀ (11), ಮನೆ ಕಟ್ಟಲು ನಿವೇಶನ ದೊರಕಿಸಿಕೊಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾಳೆ.
ಈಕೆ ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಕಳೆದ ತಿಂಗಳು 29 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಳು. ಅದರಲ್ಲಿ “ನಾನು ತಂದೆ ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯ. ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ಮನೆ ಕಟ್ಟಲು ಗ್ರಾ.ಪಂ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ” ಎಂದು ವಿನಂತಿಸಿದ್ದಾರೆ.
ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಬಾಲಕಿಯನ್ನು ಭೇಟಿ ಮಾಡಿದ ತುರುವೇಕೆರೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಅಹವಾಲು ಆಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
