ಬೆಂಗಳೂರು:ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಈ ಬಾರಿಯೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 10 ಕೃಪಾಂಕ (ಗ್ರೇಸ್​ ಮಾರ್ಕ್ಸ್​) ನೀಡಲಿದೆ.
ಕೋವಿಡ್​ 2ನೇ ಅಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ-ಪ್ರವಚನ ನಡೆದಿರಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ 10 ಕೃಪಾಂಕ ನೀಡಲು ಇಲಾಖೆ ತೀರ್ಮಾನಿಸಿದೆ. ಮೂರು ವಿಷಯಗಳಲ್ಲಿ ಒಟ್ಟಾರೆ 10 ಕೃಪಾಂಕ ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಈ ಅವಕಾಶ ದೊರೆಯಲಿದೆ. 25 ಅಂಕ ಪಡೆದು “ಸಿ” ಗ್ರೇಡ್​ನಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವುದರಿಂದ ಬಹಳಷ್ಟು ಅನುಕೂಲವಾಗಲಿದೆ. 2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್​ ಅಂಕದಿಂದಾಗಿ ಶೇ.9 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದರು.
ಸರಿಯಾದ ಬೋಧನೆ ಸಿಗದ ಮಕ್ಕಳಿಗೆ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2019ರಲ್ಲಿ 6 ವಿಷಯಗಳ ಪೈಕಿ ಎರಡು ವಿಷಯಗಳಿಗೆ 5 ಕೃಪಾಂಕ ನೀಡುವ ನಿಯಮವಿತ್ತು. 2020 ಮತ್ತು 2021ರಲ್ಲಿ ಮೂರು ವಿಷಯಗಳಿಗೆ 10 ಅಂಕ ನೀಡುವ ನಿಯಮವನ್ನು ತಾತ್ಕಾಲಿಕವಾಗಿ ಜಾರಿಗೆ ತರಲಾಗಿತ್ತು.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್​ರೇಪ್​ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ

ದಾಖಲೆ ಬರೆದ ಕೆಂಪಡಕೆ ಬೆಲೆ! ಅಡಕೆ ಬೆಳೆಗಾರರ ಮೊಗದಲ್ಲಿ ಸಂತಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
