ತುಮಕೂರು:32 ವರ್ಷದ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಎಎಸ್​ಐ ಉಮೇಶಯ್ಯಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
2017ರ ಜ.15ರಂದು ನೈಟ್ ರೌಂಡ್ಸ್​ನಲ್ಲಿದ್ದ ಗ್ರಾಮಾಂತರ‌ ಪೊಲೀಸ್​ ಠಾಣೆ ಎಎಸ್​ಐ ಉಮೇಶಯ್ಯ, ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪ್​ನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯ ಪೋಷಕರು ಎಎಸ್​ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು, ಪೊಲೀಸ್​ ಇಲಾಖೆಯೂ ತಲೆತಗ್ಗಿಸುವಂತಹ ಕೃತ್ಯ ಎಸಗಿದ್ದ ಉಮೇಶಯ್ಯ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರಿಂದ ಆಗ್ರಹ ದಟ್ಟವಾಗಿ ಕೇಳಿಬಂದಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ, ಆರೋಪ ಸಾಬೀತಾಗಿದ್ದು ಉಮೇಶಯ್ಯ ತಪ್ಪಿತಸ್ಥನೆಂದು ಜ.28ರಂದು ಘೋಷಿಸಿದ್ದರು. ಶಿಕ್ಷೆಯ ತೀರ್ಪನ್ನು ಜ.31ಕ್ಕೆ ಕಾಯ್ದಿರಿಸಿದ್ದರು. ಇಂದು ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ಅಪರಾಧಿ ಉಮೇಶಯ್ಯಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ಸಂತ್ರಸ್ತ ಯುವತಿಗೆ 1 ಲಕ್ಷ ರೂ. ದಂಡದ ಮೊತ್ತವನ್ನು ಪರಿಹಾರ ಕೊಡುವಂತೆ ಸೂಚಿಸಿದರು.
ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಲ್ಲ… ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಸ್ವಾಮಿ ಆಕ್ರೋಶ

ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + seventeen =
Remember me
