ಬೆಂಗಳೂರು:ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರದ ಜತೆಗೆ ಮನೆ ನಿರ್ಮಿಸಿಕೊಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಪ್ರವೀಣ್​ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೀಡಲಾಗುವುದು ಎಂದರು.
ಚುನಾವಣೆ ಸಂದರ್ಭದಲ್ಲಿ ಕೋಮು ಗಲಭೆ ಹಬ್ಬಿಸುವುದು. ಇದರಲ್ಲಿ ಜಿಹಾದಿ ಶಕ್ತಿಗಳನ್ನು ಒಳಗೊಳ್ಳುವುದು ಗಮನಿಸಿದ್ದು, ಸರ್ಕಾರ ನಿರ್ದಾಕ್ಷಿಣ್ಯವಾಗಿ ದಮನ ಮಾಡಲಿದೆ. ಅಗತ್ಯಬಿದ್ದರೆ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಒಪ್ಪಿಸಬೇಕು ಎಂದಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ವೈಯಕ್ತಿಕವಾಗಿ ಪ್ರವೀಣ್​ ಕುಟುಂಬಕ್ಕೆ 10 ಲಕ್ಷ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರ್ಕಾರಕ್ಕಿದೆ ಎಂದಿದ್ದಾರೆ.
ಕುಟುಂಬಸ್ಥರ ಆಕ್ರಂದನದ ನಡುವೆ ಪಂಚಭೂತಗಳಲ್ಲಿ ಲೀನವಾದ ಪ್ರವೀಣ್: ಬಿಜೆಪಿ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
