ಬೆಂಗಳೂರು:2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.
ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. ಮೂರು ವಿಭಾಗದಲ್ಲಿ ಒಟ್ಟಾರೆ ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ ಎಂದು ವಿವರಿಸಿದರು.
ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಏ.22ರಿಂದ ಮೇ 18ರ ವರೆಗೆ ಪರೀಕ್ಷೆ ನಡೆದಿತ್ತು. ಮಧ್ಯಾಹ್ನ 12 ಗಂಟೆ ನಂತರhttps://pue.karnataka.gov.in/ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್​ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 − two =
Remember me
