ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಸುರಿದಿದ್ದು, ದಕ್ಷಿಣ ಕನ್ನಡ, ಮಂಗಳೂರು, ಧರ್ಮಸ್ಥಳ, ಪೆಣಂಬೂರು, ಉಪ್ಪಿನಂಗಡಿ, ಕಾರ್ಕಳ, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಸರಾಸರಿ 10 ಸೆಂ.ಮೀ. ಮಳೆಯಾಗಿದೆ.
ಶಿವಮೊಗ್ಗ, ಹಾಸನದಲ್ಲಿ ಆ.25ರಂದು, ಚಿಕ್ಕಮಗಳೂರು, ಕೊಡಗಿನಲ್ಲಿ ಆ.26ರಿಂದ ಮುಂದಿನ 2 ದಿನ ಹಾಗೂ ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಆ.28ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದುರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗದ ಇತರೆ ಜಿಲ್ಲೆಗಳಲ್ಲಿ ಆಗಾಗ್ಗೆ ಚದುರಿದಂತೆ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಜೂ.1ರಿಂದ ಆ.24ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 654 ಮಿ.ಮೀ. ಮಳೆ ಆಗಬೇಕಿತ್ತು. ಆದರೆ, 760 ಮಿ.ಮೀ. ಮಳೆಯಾಗಿದ್ದು, ಶೇ.16 ಹೆಚ್ಚು ಸುರಿದಿದೆ.
ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್​ಗೆ ಹೋಗ್ತಾರಾ? ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಸಿಪಿವೈ

ಇನ್ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ ಬೆಂಗಳೂರು-ಮಂಗಳೂರು ಎಕ್ಸ್​ಪ್ರೆಸ್​ ರೈಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
