ಬೀದರ್​:ರಾಜ್ಯದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟೇಜ್​ ಅಲ್ಲ, ಶೇ.65 ಸೋರಿಕೆಯಾಗುತ್ತಿದೆ. ಮಂತ್ರಿ, ಗುತ್ತಿಗೆದಾರ, ಇಂಜಿನಿಯರ್​ ಅವರಿಂದ ಹಿಡಿದು ಶೇ.65 ಪರ್ಸೆಂಟ್​ ಕಮಿಷನ್​ ನೀಡಬೇಕು. ಇಂಥ ಸ್ಥಿತಿಗೆ ಯಾರು ಕಾರಣ? ಭ್ರಷ್ಟಾಚಾರ ಸಂಬಂಧ ಬೀದಿಗಿಳಿದು ಕಾಂಗ್ರೆಸ್​ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಬುನಾದಿ ಹಾಕಿದ್ದೇ ಆ ಪಕ್ಷ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಎಂದು ಕಿಡಿಕಾರಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್​ಡಿಕೆ, ಹಾಲು ಉತ್ಪಾದಕರ ಸಂಘದಲ್ಲಿ ನೇಮಕಕ್ಕೆ 25-50 ಲಕ್ಷ ರೂ. ಲಂಚ ನಿಗದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಇದೀಗ ಪಿಎಸ್​ಐ ನೇಮಕಾತಿ ವಿಷಯ ಹೊರಬಿದ್ದಿದೆ. ಮನೆ-ಮಠ ಮಾರಿ ಲಕ್ಷಾಂತರ ರೂ. ಕೊಟ್ಟು ಸರ್ಕಾರಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಇದರಲ್ಲಿ ದೊಡ್ಡವರು ಯಾರೂ ಸಿಕ್ಕಿ ಹಾಕಿಕೊಳ್ಳಲ್ಲ. ಪಾರದರ್ಶಕ ತನಿಖೆ ನಡೆಸಿ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಹಿಡಿತ ಇಲ್ಲ. ಒಂದೆಡೆ ಪಿಎಸ್​ಐ ನೇಮಕ ಪರೀಕ್ಷೆಯಲ್ಲಿ ಅಕ್ರಮ, ಇನ್ನೊಂದೆಡೆ ಗುತ್ತಿಗೆದಾರರಿಂದ 40 ಪರ್ಸೆಂಟೇಜ್​ ಕಮಿಷನ್​. ಹೀಗೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಶಾಸಕ ಬಂಡೆಪ್ಪ ಖಾಶೆಂಪುರ, ಜೆಡಿಎಸ್​ ಜಿಲ್ಲಾಧ್ಯ ರಮೇಶ ಪಾಟೀಲ್​ ಸೋಲಪುರ ಇತರರಿದ್ದರು.
ಸರ್ಕಾರದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ಹೇಗೆ ಗೆಲ್ಲಬೇಕು? ಹೇಗೆ ಬೆಂಕಿ ಹಚ್ಚಬೇಕು ಎಂಬುದು ಮಾತ್ರ ಹೈಕಮಾಂಡ್​ಗೆ ಗೊತ್ತಿರುವಂತಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸಿಗರೇ ಲೋಕಾಯುಕ್ತವನ್ನು ಕಂಪ್ಲೀಟ್​ ಬಂದ್​ ಮಾಡಿದವರು. ಬಿಜೆಪಿ, ಕಾಂಗ್ರೆಸ್​ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಆಕ್ರೋಶ ಹೊರಹಾಕಿದರು.
ಕ್ರೂಸರ್​-ಟ್ರಕ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 7 ಮಂದಿ ದುರ್ಮರಣ

ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಹೆಜ್ಜೇನು ದಾಳಿ: ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಬೋಜೇಗೌಡ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + four =
Remember me
